ಮುಡಾ ಹಗರಣ ಸಂಬಂಧ ಅಂತಿಮ ತೀರ್ಪು ಹೊರ ಬಿದ್ದಿಲ್ಲ. ಒಂದು ವೇಳೆ ಪ್ರಾಸಿಕ್ಯೂಷನ್ಗೆ ಹೈಕೋರ್ಟ್ ಅಸ್ತು ಎಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು
‘ಮಲಯಾಳಂ ಚಿತ್ರರಂಗದಲ್ಲಿ ನಡೆದಿದೆ ಎನ್ನಲಾದ ಸೆಕ್ಸ್ ಹಗರಣದ ಕುರಿತು ನ್ಯಾ.ಹೇಮಾ ಸಮಿತಿ ವರದಿ ನೀಡಿ 4 ವರ್ಷವಾದರೂ ಕ್ರಮಕೈಗೊಂಡಿರಲಿಲ್ಲ ಏಕೆ?’ ಎಂದು ಕೇರಳದ ಎಡರಂಗ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ.
ತುರ್ತುಪರಿಸ್ಥಿತಿಯ ಕಥೆ ಹೊಂದಿರುವ ಹಾಗೂ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿ, ಬಿಜೆಪಿ ಸಂಸದೆ ಕಂಗನಾ ರಾಣಾವತ್ ಕಾಣಿಸಿಕೊಂಡಿರುವ ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆಗೆ ಸೆನ್ಸಾರ್ ಮಂಡಳಿಗೆ ಸೂಚನೆ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.
ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮುಂದಿನ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ತನ್ನನ್ನು ಪರಿತ್ಯಜಿಸಿರುವ ಗಂಡನಿಂದ ಮಾಸಿಕ 6.16 ಲಕ್ಷ ರು. ಜೀವನಾಂಶ ಕೋರಿದ ಪತ್ನಿಯ ಧೋರಣೆಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿದ ಹೈಕೋರ್ಟ್ ಇಷ್ಟು ಹಣವನ್ನು ಖರ್ಚು ಮಾಡಬೇಕು ಎಂದು ಬಯಸಿದರೆ ತಾನೇ ದುಡಿಯಬೇಕು ಎಂದು ಕಟುವಾಗಿ ನುಡಿದ ಘಟನೆ ಇತ್ತೀಚೆಗೆ ನಡೆದಿದೆ.