ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಪ್ರಕರಣದ ಮೊದಲ ಆರೋಪಿಯಾದ ಎಚ್.ಡಿ. ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
27 ಜನರ ಸಾವಿಗೆ ಕಾರಣವಾದ ಟಿಆರ್ಪಿ ಗೇಮ್ ಝೋನ್ ಬೆಂಕಿಯ ಬಗ್ಗೆ ರಾಜಕೋಟ್ ಮಹಾನಗರ ಪಾಲಿಕೆ ಹಾಗೂ ಗುಜರಾತ್ ಸರ್ಕಾರವನ್ನು ಗುಜರಾತ್ ಹೈಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ
ಕರ್ನಾಟಕ ಹೈಕೋರ್ಟ್ನಲ್ಲಿ ಪ್ರತಿದಿನ ದಾಖಲಾಗುವ, ವಿಲೇವಾರಿಯಾಗುವ ಮತ್ತು ವಿಲೇವಾರಿಗೆ ಬಾಕಿಯಿರುವ ಅರ್ಜಿಗಳ ಸಂಪೂರ್ಣ ವಿವರಗಳು ಇನ್ನುಮುಂದೆ ಸಾರ್ವಜನಿಕರು ಸೇರಿದಂತೆ ನ್ಯಾಯವಾದಿಗಳಿಗೆ ಸುಲಭವಾಗಿ ಬೆರಳ ತುದಿಯಲ್ಲಿ ಲಭ್ಯವಾಗಲಿವೆ.
ಕಲ್ಕತ್ತಾ ಹೈಕೋರ್ಟ್ ಇದೀಗ 2010-2012ರ ಅವಧಿಯಲ್ಲಿ ಮುಸ್ಲಿಂ ಧರ್ಮದಲ್ಲಿನ ಹಲವು ಜಾತಿಗಳು ಸೇರಿ 42ಕ್ಕೂ ಹೆಚ್ಚು ಸಮುದಾಯಗಳನ್ನು ಒಬಿಸಿ ಮೀಸಲು ಪಟ್ಟಿಗೆ ಸೇರಿಸಿದ್ದ ಆದೇಶವನ್ನು ರದ್ದುಪಡಿಸಿದೆ.
ಠಾಣೆಯಲ್ಲಿ ಸಿವಿಲ್ ವ್ಯಾಜ್ಯ ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಪುನರಾವರ್ತನೆ ಆಗುತ್ತಿರುವುದಕ್ಕೆ ಮತ್ತೊಮ್ಮೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಠಾಣೆಗಳನ್ನು ವ್ಯಾಪಾರ ಕೇಂದ್ರಗಳಾಗಿ ಮಾರ್ಪಡಿಸಲಾಗಿದೆ ಎಂದು ಕಟುವಾಗಿ ನುಡಿದಿದೆ.