ಕೊಡವರಿಗೆ ಪ್ರತ್ಯೇಕ ಸ್ವಾಯತ್ತತೆ: ಮಧ್ಯಂತರ ಅರ್ಜಿ ವಿಚಾರಿಸಿದ ಹೈಕೋರ್ಟ್
Apr 02 2024, 01:05 AM ISTಕೊಡವರಿಗೆ ಪ್ರತ್ಯೇಕ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಲು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಸಲ್ಲಿಸಿರುವ ಮನವಿ ಪರಿಗಣಿವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಿರೋಧಿಸಿ ಎಸ್ಸಿ, ಎಸ್ಟಿ, ಬುಡಕಟ್ಟು ಹಾಗೂ ಆದಿವಾಸಿ ಸಮುದಾಯಗಳು ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅದನ್ನು ವಿಚಾರಣೆಗೆ ಪರಿಗಣಿಸಿ ವಿಭಾಗೀಯ ನ್ಯಾಯಪೀಠ ಆದೇಶಿಸಿತು.