ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ: ಹೈಕೋರ್ಟ್
Oct 06 2023, 12:08 PM ISTಸರಿಯಾದ ಕೊಠಡಿ ವ್ಯವಸ್ಥೆ, ಕ್ರೀಡಾ ಮೈದಾನ, ಪ್ರಯೋಗಾಲಯ ಹಾಗೂ ಅಗ್ನಿ ಸುರಕ್ಷತಾ ಕ್ರಮಗಳಿಲ್ಲದಿದ್ದರೂ ಶಾಲೆಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ 2 ಖಾಸಗಿ ಶಾಲೆಗಳನ್ನು ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿತು. ಶಾಲೆಗಳನ್ನು ವ್ಯವಹಾರ ಕೇಂದ್ರವನ್ನಾಗಿಸಲು ಸಾಧ್ಯವಿಲ್ಲ. ಅಪ್ರಾಪ್ತ ಮಕ್ಕಳ ಜೀವದ ಜೊತೆಗೆ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಕೆಂಡಕಾರಿತು.