ಕರ್ನಾಟಕವು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ
ಮುಡಾ ಪ್ರಕರಣದ ಪೊಲೀಸ್ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ 2024ರ ಸೆ.24ರಂದು ಹೊರಡಿಸಿದ ತೀರ್ಪು ರದ್ದು ಕೋರಿ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕರಾರು ಮೇಲ್ಮನವಿ ಸಲ್ಲಿಸಿದ್ದಾರೆ.
ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಳೆದ 2 ವರ್ಷದಿಂದ ಬಂಧನಕ್ಕೊಳಗಾಗಿದ್ದ ದೆಹಲಿಯ ಆಪ್ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.
ನ್ಯಾಯಾಲಯದ ಆದೇಶದಂತೆ ಪತ್ನಿಗೆ ಜೀವನಾಂಶ ಪಾವತಿಸುವವರೆಗೂ ಪತಿ ದಾಖಲಿಸಿರುವ ವಿಚ್ಛೇದನ ಅರ್ಜಿ ಕುರಿತ ವಿಚಾರಣೆಗೆ ನ್ಯಾಯಾಲಯಗಳು ತಡೆಯಾಜ್ಞೆ ನೀಡಬಹುದು ಎಂದು ಹೈಕೋರ್ಟ್ ಆದೇಶಿಸಿದೆ.
ಸುಮಾರು 8 ಸಾವಿರ ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮಹಿಳೆಯೊಬ್ಬರು ಹಲವು ಪುರುಷರನ್ನು ಮದುವೆಯಾಗಿ, ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕ್ರೌರ್ಯ ಅಪರಾಧಗಳ ಸಂಬಂಧ ದೂರು ನೀಡಿ ಕಿರುಕುಳ ನೀಡುವಂತಹ ಮತ್ತೊಂದು ಪ್ರಕರಣಕ್ಕೆ ಹೈಕೋರ್ಟ್ ಸಾಕ್ಷಿಯಾಗಿದೆ.