ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ 24 ಪೆಡ್ಲರ್‌ ಗಳ ಬಂಧನ

KannadaprabhaNewsNetwork |  
Published : Feb 10, 2026, 04:30 AM IST
9ಜೆಎಲ್‌ಆರ್‌ಚಿತ್ರ1ಎ: ಜಗಳೂರು ಪಟ್ಟಣದಲ್ಲಿ ಕಾ.ನಿ.ಪ. ಸಂಘದ ಅಧ್ಯಕ್ಷ ಲೋಕೇಶ್‌ ಎಂ.ಐಹೊಳೆ ಸುದ್ದಿಗೋಷ್ಠಿ ನಡೆಸಿದರು | Kannada Prabha

ಸಾರಾಂಶ

ಮಾದಕ ವಸ್ತು ಮಾರಾಟ ಜಾಲದ ಮೇಲೆ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 24 ಪೆಡ್ಲರ್‌ಗಳನ್ನು ಸೆರೆ ಹಿಡಿದು ಎರಡು ಕೋಟಿ ರು. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮಾದಕ ವಸ್ತು ಮಾರಾಟ ಜಾಲದ ಮೇಲೆ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 24 ಪೆಡ್ಲರ್‌ಗಳನ್ನು ಸೆರೆ ಹಿಡಿದು ಎರಡು ಕೋಟಿ ರು. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಕುಮಾರಸ್ವಾಮಿ ಲೇಔಟ್‌, ಗೋವಿಂದರಾಜನಗರ, ಬಸವನಗುಡಿ, ಜೆ.ಜೆ.ನಗರ, ಹೆಬ್ಬಾಳ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳಿಂದ 1.023 ಕೆಜಿ ಹೈಡ್ರೋ ಗಾಂಜಾ, 76 ಕೆಜಿ ಗಾಂಜಾ, 11.600 ಕೆಜಿ ಚರಸ್‌ ಹಾಗೂ 121 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ಎರಡು ಕೋಟಿ ರು. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ದಂಧೆ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

24 ಆರೋಪಿಗಳ ಪೈಕಿ ಕೇರಳ, ತೆಲಂಗಾಣ ಹಾಗೂ ಆಂಧ್ರಪ್ರದೇಶದವರು ಸೇರಿದ್ದಾರೆ. ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ನಗರದಲ್ಲಿ ದುಬಾರಿ ಬೆಲೆಗೆ ಆರೋಪಿಗಳು ಮಾರಾಟ ಮಾಡುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ-ಬಿಟಿ ಉದ್ಯೋಗಿಗಳೇ ಡ್ರಗ್ಸ್ ದಂಧೆಕೋರರು ಗುರಿಯಾಗಿದ್ದರು ಎಂದು ಹೇಳಿದ್ದಾರೆ.

ಸಿಸಿಬಿಯಿಂದ 1.5 ಕೋಟಿ ಬೆಲೆ ಡ್ರಗ್ಸ್ ಜಪ್ತಿ:

ಸಿಸಿಬಿ ಸಹ ದೊಡ್ಡ ಮೊತ್ತದ ಡ್ರಗ್ಸ್‌ ಜಪ್ತಿ ಮಾಡಿದೆ. ತೆಲಂಗಾಣ ರಾಜ್ಯದ ಚಿಕತಿ ಕಿರಣ್‌ನಿಂದ 55 ಲಕ್ಷ ರು. ಮೌಲ್ಯದ 11.600 ಕೆಜಿ ಚರಸ್‌ ಹಾಗೂ ಮತ್ತೊಬ್ಬ ಆರೋಪಿಯಿಂದ 1 ಕೋಟಿ ರು. ಮೌಲ್ಯದ 1 ಕೆಜಿ ಹೈಡ್ರೋ ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಡ್ರಗ್ಸ್ ಮಾರಾಟ ಜಾಲದ ಮೇಲೆ ನಿರಂತರವಾಗಿ ನಿಗಾ ವಹಿಸಿರುವ ಸಿಸಿಬಿ ಡಿಸಿಪಿ -2 ರಾಜಾ ಇಮಾಮ್ ಕಾಸಿಂ ನೇತೃತ್ವದ ತಂಡ, ಇತ್ತೀಚೆಗೆ ಕಿರಣ್ ಸೇರಿ ಇಬ್ಬರ ಬಗ್ಗೆ ಮಾಹಿತಿ ಕಲೆ ಹಾಕಿತು. ಈ ಸುಳಿವು ಆಧರಿಸಿ ಮಹದೇವಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗಿಳಿದಾಗ ಸಿಸಿಬಿ ಪೆಡ್ಲರ್‌ಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 1.5 ಕೋಟಿ ರು. ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಬೀಗ ಹಾಕಿದ ಮನೆಗಳಿಗೆ ಮಾಸ್ಕ್‌ ಧರಿಸಿ ಕಳ್ಳತನ ಮಾಡಿದ ಆಟೋ ಚಾಲಕ ಬಂಧನ
ಏರ್‌ಪೋರ್ಟಲ್ಲಿ ಕಸ್ಟಮ್ಸ್ ಅಧಿಕಾರಿಳಿಂದ ₹10.69 ಕೋಟಿ ಡ್ರಗ್ಸ್ ವಶ