ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಮೂಲಕ ಪ್ರಜ್ವಲ್ ವಿರುದ್ಧ ಒಟ್ಟು ಮೂರು ಪ್ರಕರಣಗಳು ದಾಖಲಾದಂತಾಗಿದೆ.
ಅಪಹರಣದಿಂದ ರಕ್ಷಿಸಲಾಗಿರುವ ಮಹಿಳೆ ಎಸ್ಐಟಿ ವಿಚಾರಣೆ ವೇಳೆ ಶಾಸಕ ಎಚ್.ಡಿ.ರೇವಣ್ಣ ತನ್ನ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆದರೆ, ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ತನ್ನನ್ನು ಬೆದರಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಸಿಐಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಶೀಘ್ರವೇ ಸಿಆರ್‌ಪಿಸಿ 164 ಅಡಿ ಹೇಳಿಕೆ ದಾಖಲು:
ಈ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಈಗಾಗಲೇ ಎಚ್.ಡಿ.ರೇವಣ್ಣ ಮತ್ತು ಸತೀಶ್ ಬಾಬು ಎಂಬುವವರನ್ನು ಎಸ್ಐಟಿ ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಇದೀಗ ಸಂತ್ರಸ್ತೆ ನೀಡಿದ ಹೇಳಿಕೆ ಆಧರಿಸಿ ಸಂಸದ ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಇದರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.