4 ತಾಸು ದರ್ಶನ್‌ ಪತ್ನಿ ವಿಜಯಲಕ್ಷ್ಮೀ ವಿಚಾರಣೆ

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅ‍ವರನ್ನು ಪೊಲೀಸರು ಬುಧವಾರ ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು :  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅ‍ವರನ್ನು ಪೊಲೀಸರು ಬುಧವಾರ ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ನೋಟಿಸ್ ಹಿನ್ನಲೆಯಲ್ಲಿ ಅನ್ನಪೂರ್ಣೇಶ್ವರಿ ನಗರದ ಠಾಣೆಯಲ್ಲಿ ತನಿಖಾಧಿಕಾರಿ ಮುಂದೆ ಬುಧವಾರ ಮಧ್ಯಾಹ್ನ ವಿಜಯಲಕ್ಷ್ಮೀ ಹಾಜರಾದರು. ಬಳಿಕ ನಾಲ್ಕು ತಾಸುಗಳ ವಿಚಾರಣೆ ನಡೆಸಿ ಅವರನ್ನು ಪೊಲೀಸರು ಕಳುಹಿಸಿದ್ದಾರೆ.

ಹೊಸಕೆರೆಹಳ್ಳಿ ಸಮೀಪ ವಿಜಯಲಕ್ಷ್ಮೀರವರು ನೆಲೆಸಿರುವ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲೇ ರೇಣುಕಾಸ್ವಾಮಿ ಹತ್ಯೆ ಕೃತ್ಯದ ವೇಳೆ ದರ್ಶನ್ ಧರಿಸಿದ್ದ ಶೂಗಳು ಪತ್ತೆಯಾಗಿದ್ದವು. ಈ ಹಿನ್ನಲೆಯಲ್ಲಿ ವಿಜಯಲಕ್ಷ್ಮೀ ಅವರಿಗೂ ಪೊಲೀಸರ ತನಿಖೆ ಬಿಸಿ ತಟ್ಟಿದೆ.

Share this article