ಕನ್ನಡಪ್ರಭ ವಾರ್ತೆ ಮಂಡ್ಯಮಂಡ್ಯ ವಿಶ್ವವಿದ್ಯಾಲಯದಲ್ಲಿ ಕರ್ತವ್ಯದಲ್ಲಿ ಮುಂದುವರೆಯಲು ಅವಕಾಶ ನಿರಾಕರಣೆಗೊಳಗಾಗಿ ಪ್ರತಿಭಟನೆಯ ಹಾದಿ ಹಿಡಿದಿದ್ದ ೩೨ ಬೋಧಕೇತರ ಸಿಬ್ಬಂದಿ ಪೈಕಿ ನೌಕರರೊಬ್ಬರ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉದ್ಯೋಗ ನಿರಾಕರಣೆಯಿಂದ ನೊಂದಿದ್ದ ಸಿಬ್ಬಂದಿಯೊಬ್ಬರು ತಾಯಿಯ ಸಾವಿನಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಡೆದಿದೆ.
ತೂಬಿನಕೆರೆಯ ಸರ್.ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರದಲ್ಲಿ ಸಂಚಿತ ವೇತನದ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ಬೋಧಕೇತರ ಸಿಬ್ಬಂದಿಯನ್ನು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಕರ್ತವ್ಯದಲ್ಲಿ ಮುಂದುವರೆಸಲು ನಿರಾಕರಿಸಿದ್ದರು. ಅತಂತ್ರ ಸ್ಥಿತಿ ಎದುರಿಸುತ್ತಿದ್ದ ೩೨ ಬೋಧಕೇತರ ಸಿಬ್ಬಂದಿ ಕಳೆದೊಂದು ತಿಂಗಳಿಂದ ಪ್ರತಿಭಟನೆಯ ಹಾದಿ ಹಿಡಿದಿದ್ದರು.
ಈ ಬೋಧಕೇತರ ಸಿಬ್ಬಂದಿಗೆ ಐದಾರು ತಿಂಗಳಿಂದ ಸಂಬಳವಾಗದಿದ್ದರಿಂದ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದರು. ಪ್ರಮೋದ್ ಅವರ ತಾಯಿ ಭಾಗ್ಯಮ್ಮರಿಗೆ ನಿತ್ಯವೂ ಮಗನ ಉದ್ಯೋಗದ ಬಗ್ಗೆಯೇ ಚಿಂತೆ ಕಾಡಿತ್ತು. ಪ್ರತಿದಿನವೂ ಪ್ರಮೋದ್ ಮನೆಗೆ ಬಂದಾಗ ಉದ್ಯೋಗದ ಬಗ್ಗೆ ವಿಚಾರಿಸುತ್ತಿದ್ದರು. ಪ್ರಮೋದ್ ಕೂಡ ನಿರಾಸೆಯಿಂದಲೇ ತಾಯಿಗೆ ಉತ್ತರ ನೀಡುತ್ತಿದ್ದರೆನ್ನಲಾಗಿದೆ.ಇದರಿಂದ ಮನನೊಂದ ಭಾಗ್ಯಮ್ಮ ಗುರುವಾರ ಬೆಳಗ್ಗೆ ೫ ಗಂಟೆ ಸಮಯದಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತಾಯಿಯ ಸಾವಿನಿಂದ ಪ್ರಮೋದ್ ಕೂಡ ಕಂಗಾಲಾಗಿದ್ದರೆನ್ನಲಾಗಿದ್ದು, ತಾಯಿಯ ಅಂತ್ಯಕ್ರಿಯೆ ಮುಗಿಸಿ ಬಂದ ಪ್ರಮೋದ್ ಬೋಧಕೇತರ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಬಂದು ನನ್ನ ತಾಯಿಯ ಸಾವಿಗೆ ನಾನೇ ಕಾರಣನಾದೆ ಎಂದು ಕಣ್ಣೀರಿಟ್ಟಿದ್ದನು. ಈ ವೇಳೆ ಎಲ್ಲರೂ ಆತನನ್ನು ಸಮಾಧಾನಪಡಿಸಿ ಮನೆಗೆ ಕಳುಹಿಸಿದ್ದರು. ತಾಯಿಯನ್ನು ಕಳೆದುಕೊಂಡು, ಉದ್ಯೋಗವಿಲ್ಲದ ಪರಿಸ್ಥಿತಿಯನ್ನು ಎದುರಿಸಲಾಗದೆ ಪ್ರಮೋದ್ ಸಂಜೆ ೪.೩೦ರ ಸಮಯದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು ಎಂದು ಹೇಳಲಾಗಿದೆ. ಕೂಡಲೇ ಕುಟುಂಬದವರು, ಸ್ನೇಹಿತರು ಆತನನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕ ರಮೇಶ್ ಬಂಡಿಸಿದ್ದೇಗೌಡ ಭೇಟಿ:
ಏನಾಗಿತ್ತು?
ರಾಜ್ಯ ಸರ್ಕಾರದಿಂದ ಮಂಡ್ಯ ವಿಶ್ವವಿದ್ಯಾಲಯ ಘೋಷಣೆಯಾದ ಬಳಿಕ ೨೦೨೩-೨೪ನೇ ಶೈಕ್ಷಣಿಕ ಸಾಲಿನಿಂದ ಸ್ನಾತಕೋತ್ತರ ಕೇಂದ್ರವು ಮೈಸೂರು ವಿಶ್ವವಿದ್ಯಾಲಯದಿಂದ ಮಂಡ್ಯ ವಿವಿ ಸುಪರ್ದಿಗೆ ಬಂದಿತು. ಮೈಸೂರು ವಿಶ್ವ ವಿದ್ಯಾಲಯವು ೩೨ ಬೋಧಕೇತರ ಸಿಬ್ಬಂದಿ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಇವರನ್ನು ಮುಂದುವರೆಸುವಂತೆ ಕೋರಿರುತ್ತಾರೆ.