ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಕೊಲೆ

KannadaprabhaNewsNetwork |  
Published : Jun 24, 2026, 01:45 AM IST
21 | Kannada Prabha

ಸಾರಾಂಶ

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನು ಎದುರು ಮನೆ ವ್ಯಕ್ತಿಯೇ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಕೆ.ಶೆಟ್ಟಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರಿಂದ ಆರೋಪಿ ಪತ್ತೆಗೆ ತಂಡ ರಚನೆ.

ಕೆ.ಎಂ.ದೊಡ್ಡಿ:

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನು ಎದುರು ಮನೆ ವ್ಯಕ್ತಿಯೇ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಕೆ.ಶೆಟ್ಟಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸಂಜೆ ಮನೆ ಸಮೀಪದ ಅಂಗಡಿ ಬಳಿ ಕುಳಿತಿದ್ದ ಗಣೇಶ್ ಜೊತೆ ಬೆಳ್ತಂಗಡಿಯಲ್ಲಿ ವಿಎ ಆಗಿರುವ ಇದೇ ಗ್ರಾಮದ ಜಯಚಂದ್ರ ಜಗಳ ತೆಗೆದು ಹಲ್ಲೆ ಮಾಡಿದ್ದಾನೆ. ಅಷ್ಟಕ್ಕೆ ಸುಮನಾಗದೆ ಮನೆ ತನಕ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ.

ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ತಕ್ಷಣ ಗಣೇಶ್ ನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕೆತ್ಸೆ ಕೊಡಿಸಿ ಮನೆಗೆ ಕರೆ ತಂದಿದ್ದಾರೆ. ನಂತರ ಪೊಲೀಸರು ಜಯಚಂದ್ರನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಮಂಗಳವಾರ ಮುಂಜಾನೆ 5 ಗಂಟೆಗೆ ಹಲ್ಲೆಯಿಂದ ಗಾಯಗೊಂಡಿದ್ದ ಗಣೇಶ್ ಮೃತ ಪಟ್ಟಿದ್ದಾನೆ. ಈ ವಿಷಯ ತಿಳಿದ ಜಯಚಂದ್ರ ನಾಪತ್ತೆ ಆಗಿದ್ದಾನೆ. ಈ ಸಂಬಂದ ಕೆ.ಎಂ.ದೊಡ್ಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್ಪಿ ಯಶ್ವಂತ್, ಸರ್ಕಲ್ ಇನ್ಸ್‌ಪೆಕ್ಟರ್ ಅನಿಲ್ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ತಂಡ ರಚಿಸಿದ್ದಾರೆ.ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಓರ್ವ ಸಾವು, ಮತ್ತಿಬ್ಬರಿಗೆ ಗಾಯಮಳವಳ್ಳಿ: ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ಮಾರೇಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಕೋಡಿಮೋಳೆ ಗ್ರಾಮದ ಶಿವಕುಮಾರ್ (32) ಸಾವನ್ನಪ್ಪಿದ ದುರ್ದೈವಿ. ಗಾಯಗೊಂಡ ಮಸ್ತಾಪ್, ಸಾಮೀರ್ ಅವರನ್ನು ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು, ಮೈಸೂರು ಆಸ್ಪತ್ರೆಗೆ ಸೇರಿಸಲಾಗಿದೆ. ಮಳವಳ್ಳಿಯಿಂದ ಚಾಮರಾಜನಗರ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಸ್ನೇಹಿತರಿಂದಲೇ ಯುವಕನ ಹತ್ಯೆ: ಆರೋಪಿಗಳಿಬ್ಬರ ಬಂಧನ
ನಾಗಸಾಧು ಸೋಗಲ್ಲಿ ಬಂದು ವಾಸ್ತು ಶಿಲ್ಪಿಯಿಂದ ಚಿನ್ನದ ಉಂಗುರ ಎಗರಿಸಿ ಪರಾರಿ