ಬೆಂಗಳೂರು : ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಿತನಾಗಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ

KannadaprabhaNewsNetwork |  
Published : Nov 18, 2024, 01:16 AM ISTUpdated : Nov 18, 2024, 04:44 AM IST
Crime News

ಸಾರಾಂಶ

ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಿತನಾಗಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಬಳಿಕ ಮದುವೆ ಆಗದೆ ವಂಚಿಸಿದ ಆರೋಪದಡಿ ಪ್ರಿಯಕರನ ವಿರುದ್ಧ ಯುವತಿಯೊಬ್ಬಳು ಮಡಿವಾಳ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

 ಬೆಂಗಳೂರು : ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಿತನಾಗಿ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಬಳಿಕ ಮದುವೆ ಆಗದೆ ವಂಚಿಸಿದ ಆರೋಪದಡಿ ಪ್ರಿಯಕರನ ವಿರುದ್ಧ ಯುವತಿಯೊಬ್ಬಳು ಮಡಿವಾಳ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿ ನಿಹಾಲ್‌ ಹುಸೇನ್‌ ಎಂಬಾತನ ವಿರುದ್ಧ 24 ವರ್ಷದ ಸಂತ್ರಸ್ತೆ ದೂರು ನೀಡಿದ್ದಾರೆ. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರಿನ ವಿವರ: ಕಳೆದ ಮಾರ್ಚ್‌ನಲ್ಲಿ ಡೇಟಿಂಗ್‌ ಆ್ಯಪ್‌ವೊಂದರಲ್ಲಿ ನಿಹಾಲ್‌ ಪರಿಚಿತನಾಗಿದ್ದ. ಕೆಲ ದಿನಗಳ ಬಳಿಕ ಇಬ್ಬರು ಮೊಬೈಲ್‌ ಸಂಖ್ಯೆ ಪಡೆದುಕೊಂಡು ಚಾಟಿಂಗ್‌ ಆರಂಭಿಸಿದ್ದೆವು. ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದು ಪರಸ್ಪರ ಪ್ರೀತಿಸುತ್ತಿದ್ದೆವು. ಇತ್ತೀಚೆಗೆ ಪಾರ್ಟಿ ನೆಪದಲ್ಲಿ ನನ್ನನ್ನು ಹೋಟೆಲ್‌ವೊಂದಕ್ಕೆ ಕರೆದೊಯ್ದ ನಿಹಾಲ್‌, ತಂಪು ಪಾನಿಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕುಡಿಸಿದ್ದ. ಬಳಿಕ ಅರೆಪ್ರಜ್ಞಾವಸ್ಥೆಯಲ್ಲಿದ್ದ ನನ್ನ ಮೇಲೆ ನಿಹಾಲ್‌ ಅತ್ಯಾಚಾರ ಮಾಡಿದ್ದಾನೆ. ಈತನಿಂದ ನಾನು ಗರ್ಭಿಣಿಯಾಗಿದ್ದೆ. ಬಳಿಕ ಮದುವೆ ಆಗುವುದಾಗಿ ನಂಬಿಸಿ ಗರ್ಭಪಾತ ಮಾಡಿಸಿದ್ದ. ಇದೀಗ ನನ್ನನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾನೆ. ಹೀಗಾಗಿ ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ಆರೋಪಿ ಹಾಗೂ ಸಂತ್ರಸ್ತೆ ಇಬ್ಬರ ಹೇಳಿಕೆ ದಾಖಲಿಸಲಾಗಿದೆ. ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ವಿಚ್ಛೇದಿತ ಪತ್ನಿ, ಮಗಳ ಮೇಲೆಯೇ ಆ್ಯಸಿಡ್‌ ದಾಳಿ
ಡ್ರಗ್ಸ್‌ ನೀಡಿ 50 ಮಹಿಳೆಯರ ರೇಪ್‌ ಮಾಡಿದ್ದ ಜ್ಯೋತಿಷಿ ಸೆರೆ!