ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗೆ ಗುಂಡು ಹಾರಿಸಿ ಬಂಧನ

KannadaprabhaNewsNetwork |  
Published : Nov 10, 2025, 03:30 AM ISTUpdated : Nov 10, 2025, 08:16 AM IST
Police

ಸಾರಾಂಶ

ಕೊಲೆ ಪ್ರಕರಣಗಳ ಸಂಬಂಧ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಆನೇಕಲ್/ ಬೆಂಗಳೂರು :  ಕೊಲೆ ಪ್ರಕರಣಗಳ ಸಂಬಂಧ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ರವಿಪ್ರಸಾದ್ ರೆಡ್ಡಿ(40) ಬಂಧಿತ ಆರೋಪಿ.

ನ.4ರಂದು ಕಾಚನಾಯಕನಹಳ್ಳಿ ನಿವಾಸಿ ಮಾದೇಶ್ ಮತ್ತು ನ.6ರಂದು ಬೊಮ್ಮಸಂದ್ರ ನಿವಾಸಿ ಬಾಲಪ್ಪ ಎಂಬವರನ್ನು ಹತ್ಯೆಗೈದು ಹಣ ಎಗರಿಸಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಸ್ಥಳ ಮಹಜರಿಗೆ ಬೊಮ್ಮಸಂದ್ರದ ಸ್ಮಶಾನದ ಬಳಿ ಶನಿವಾರ ರಾತ್ರಿ 10.30ರ ಸುಮಾರಿಗೆ ಹೋದಾಗ ಆರೋಪಿ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಗಾಯಗೊಂಡ ಆರೋಪಿ ಮತ್ತು ಪೊಲೀಸ್ ಕಾನ್ ಸ್ಟೇಬಲ್ ಅಶೋಕ್ ಅವರಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಅಧಿಕಾರಿಗಳಿಗಳು ತಿಳಿಸಿದ್ದಾರೆ.

ಎರಡು ಸುತ್ತು ಗುಂಡು ಹಾರಿಸಿ ಸೆರೆ:

ಕೊಲೆಯಾದವರ ಪೈಕಿ ಬಾಲಪ್ಪನನ್ನು ಹತ್ಯೆಗೈಯಲು ಬಳಸಿದ್ದ ಮಾರಕಾಸ್ತ್ರಗಳನ್ನು ಬೊಮ್ಮಸಂದ್ರದ ಸ್ಮಶಾನದ ಬಳಿಯ ನಿರ್ಜನ ಪ್ರದೇಶದಲ್ಲಿ ಬಿಸಾಡಿರುವುದಾಗಿ ಆರೋಪಿ ತಿಳಿಸಿದ್ದ. ಹೀಗಾಗಿ ಶನಿವಾರ ರಾತ್ರಿ ಆ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ದಾರಿ ತಪ್ಪಿಸಲು ಯತ್ನಿಸಿದ್ದಾನೆ.

ನಂತರ ನೀಲಗಿರಿ ತೋಪಿಗೆ ಕರೆದೊಯ್ದು ಅಲ್ಲಿದ್ದ ಶೆಡ್‌ನ ಪ್ಲೇವುಡ್‌ ಮರದ ಕೆಳಗೆ ಇರಿಸಿದ್ದ ಡ್ರ್ಯಾಗರ್‌ನಿಂದ ಕಾನ್‌ಸ್ಟೇಬಲ್‌ ಅಶೋಕ್‌ ಮೇಲೆ ಹಲ್ಲೆ ಮಾಡಿದ್ದಾನೆ. ಅದನ್ನು ತಡೆಯಲು ಬಂದ ಪ್ರವೀಣ್ ಎಂಬ ಮತ್ತೊಬ್ಬ ಸಿಬ್ಬಂದಿಗೂ ಹಲ್ಲೆಗೆ ಯತ್ನಿಸಿದ್ದಾನೆ. ಆಗ ಠಾಣಾಧಿಕಾರಿ ಸೋಮಶೇಖರ್‌, ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗೆ ಶರಣಾಗುವಂತೆ ಕೋರಿದ್ದಾರೆ. ಆದರೂ ಆರೋಪಿ ಮತ್ತೊಮ್ಮೆಗೆ ಹಲ್ಲೆಗೆ ಮುಂದಾಗಿದ್ದ. ಆತ್ಮರಕ್ಷಣೆ ಹಾಗೂ ಸಿಬ್ಬಂದಿ ರಕ್ಷಣೆಗಾಗಿ ಆರೋಪಿ ಎರಡು ಕಾಲುಗಳಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಣಕ್ಕಾಗಿ ಎರಡು ಕೊಲೆ!

ಆರೋಪಿ ಆಂಧ್ರಪ್ರದೇಶದಲ್ಲಿ ಲಕ್ಷಾಂತರ ರು. ಸಾಲ ಮಾಡಿಕೊಂಡು, ನಗರಕ್ಕೆ ಬಂದು 20 ದಿನಗಳಿಂದ ಹೆಬ್ಬಗೋಡಿಯ ವಿನಾಯಕನಗರದಲ್ಲಿ ವಾಸವಾಗಿದ್ದ. ಈ ಮಧ್ಯೆ ಸಿಗರೇಟ್ ವ್ಯಾಪಾರ ಮಾಡುವ ಮಾದೇಶ್ ಮನೆ ಕಟ್ಟುತ್ತಿದ್ದು, ಬಾರಿ ಹಣವಿದೆ ಎಂದು ಭಾವಿಸಿದ್ದ. ಹೀಗಾಗಿ ನ.4ರಂದು ಮಾದೇಶ್ ಮನೆ ಬಳಿ ಹೋಗಿ ಸಾಲದ ರೂಪದಲ್ಲಿ 5-10 ಲಕ್ಷ ರು. ಕೇಳಿದ್ದ. ಮಾದೇಶ್ ಕೊಟ್ಟಿಲ್ಲ. ಅದರಿಂದ ಕೋಪಗೊಂಡು ಚಾಕುವಿನಿಂದ ಹತ್ಯೆಗೈದಿದ್ದ. ನ.6ರಂದು ತಾನು ಬಾಡಿಗೆಗೆ ಇದ್ದ ಅಂಗಡಿ ಮಾಲೀಕ ಬಾಲಪ್ಪರನ್ನು ರಿಯಲ್ ಎಸ್ಟೇಟ್ ವ್ಯವಹಾರ ಇದೆ ಎಂದು ಕರೆದೊಯ್ದು ಹಣ ಕೇಳಿದ್ದ. ಆಗ ಬಾಲಪ್ಪ ಕೊಡದಿದ್ದಾಗ ಕಾರಿನಲ್ಲೇ ಹತ್ಯೆಗೈದಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ಕೊಲೆ ಅಂತ್ಯ
ಪೊಲೀಸ್‌ ಠಾಣೆ ಸಮೀಪ ಪಾನಮತ್ತ ದಂಪತಿಯ ರಂಪಾಟ