ಪರೀಕ್ಷೆಗೆ ತೆರಳುತ್ತಿದ್ದ ಸೋದರರ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ: ತಮ್ಮ ಸಾವು

KannadaprabhaNewsNetwork |  
Published : May 21, 2024, 12:37 AM ISTUpdated : May 21, 2024, 04:37 AM IST
ಅಪಘಾತ | Kannada Prabha

ಸಾರಾಂಶ

ಡಿಪ್ಲೋಮಾ ಪರೀಕ್ಷೆಗಾಗಿ ಹೊರಟಿದ್ದ ಸಹೋದರರ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ತಮ್ಮ ಸಾವನ್ನಪ್ಪಿರುವ ಘಟನೆ ನೈಸ್‌ ರಸ್ತೆಯಲ್ಲಿ ನಡೆದಿದೆ.

 ಬೆಂಗಳೂರು :  ನೈಸ್‌ ರಸ್ತೆಯ ಮಂಗನಹಳ್ಳಿ ಸೇತುವೆ ಬಳಿ ಸಹೋದರರು ದ್ವಿಚಕ್ರ ವಾಹನದಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ತಮ್ಮ ಮೃತಪಟ್ಟು, ಹಿಂಬದಿ ಸವಾರ ಅಣ್ಣ ಗಾಯಗೊಂಡಿರುವ ಘಟನೆ ನಡೆದಿದೆ.

ಧಾರವಾಡ ಮೂಲದ ವಿನಾಯಕ(20) ಮೃತ ಸವಾರ. ಈತನ ಅಣ್ಣ ಗಿರೀಶ್‌(22) ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸೋಮವಾರ ಬೆಳಗ್ಗೆ ಸುಮಾರು 7.50ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಐಟಿಐ ವ್ಯಾಸಂಗ ಮಾಡಿರುವ ಸಹೋದರರು ಜಿಗಣಿಯಲ್ಲಿ ರೂಮ್‌ ಬಾಡಿಗೆ ಪಡೆದು ವಾಸವಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದರ ಜತೆಗೆ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ಸೋಮವಾರ ಸುಂಕದಕಟ್ಟೆಯ ಕಾಲೇಜೊಂದರಲ್ಲಿ ಪರೀಕ್ಷೆ ಇದ್ದ ಹಿನ್ನೆಲೆಯಲ್ಲಿ ಬೆಳಗ್ಗೆ ಸಹೋದರರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು.

ನೈಸ್‌ ರಸ್ತೆಯ ಮಂಗನಹಳ್ಳಿ ಸೇತುವೆ ಬಳಿ ತೆರಳುವಾಗ ಹಿಂದಿನಿಂದ ಬಂದಿರುವ ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿರುವ ಸಾಧ್ಯತೆಯಿದೆ. ಈ ವೇಳೆ ರಸ್ತೆಗೆ ಬಿದ್ದ ವಿನಾಯಕನ ಮೇಲೆಯೇ ಅಪರಿಚಿತ ವಾಹನದ ಚಕ್ರ ಹರಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಗೊಂಡಿದ್ದ ಗಿರೀಶ್‌ನನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಆತನ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಬಳಿಕ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ನಾಯಿ ಮೂತ್ರ ವಿಸರ್ಜನೆ ವಿಚಾರಕ್ಕೆ ಅಪಾರ್ಟ್‌ಮೆಂಟ್‌ ನಿವಾಸಿಗಳ ಮಧ್ಯೆ ಮಾರಾಮಾರಿ
25 ಅಡಿ ಆಳದ ಗುಂಡಿಗೆ ಬಿದ್ದಿದ್ದ ಮಹಿಳೆ ರಕ್ಷಿಸಿದ ಪೊಲೀಸರು!