ಮತ್ತೊಂದು ಇರಿತ ಘಟನೆ : ಬಂಟ್ವಾಳ ಬಳಿ ವ್ಯಕ್ತಿಗೆ ಇರಿತ

Published : May 17, 2025, 07:59 AM IST
crime

ಸಾರಾಂಶ

ಇತ್ತೀಚೆಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಳಿಕ ಮತ್ತೊಂದು ಇರಿತ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಬಂಟ್ವಾಳ: ಇತ್ತೀಚೆಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಳಿಕ ಮತ್ತೊಂದು ಇರಿತ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್‌ ನಿಲ್ದಾಣ ಬಳಿ ಒಂದು ಕೋಮಿನ ಯುವಕನಿಗೆ 4 ಮಂದಿಯ ತಂಡ ಚೂರಿಯಿಂದ ಇರಿದು ಪರಾರಿ ಆಗಿದೆ.

ಇರಿತಕ್ಕೆ ಒಳಗಾದವರನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಗೆ ನೈಜಕಾರಣ ಏನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

PREV
Read more Articles on

Recommended Stories

ಉಬರ್ ಚಾಲಕನಿಗೆ ಬೆದರಿಸಿ ಕಾರು ದೋಚಿದ್ದ ರೌಡಿ ಸೇರಿ ಇಬ್ಬರ ಸೆರೆ : ಕಾರು, 3 ಮೊಬೈಲ್‌ ವಶ
ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಮಗನ ನಾಪತ್ತೆ ನಾಟಕ : ತಾಯಿಗೆ ಹೈಕೋರ್ಟಿಂದ 2 ಲಕ್ಷ ದಂಡ!