ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ಎಕ್ಸ್ ಪ್ರೆಸ್ ರೈಲು ನಂಜನಗೂಡು ಮತ್ತು ಕಡಕೊಳ ರೈಲ್ವೆ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಪಘಾತಕ್ಕೀಡಾಗಿವುದನ್ನು ಲೋಕೋ ಪೈಲಟ್ ತಪ್ಪಿಸಿದ್ದಾರೆ.ರೈಲ್ವೆ ಎಂಜಿನ್ ನ ಚಾಲಕನ ಸಮಯಪ್ರಜ್ಞೆಯಿಂದಾಗಿ ಅಪಘಾತ ತಪ್ಪಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ರೈಲನ್ನು ಧ್ವಂಸಗೊಳಿಸುವ ದುರುದ್ದೇಶಪೂರಿತ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಸೋಮಯ್ ಮರಾಂಡಿ, ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂದು ಗುರುತಿಸಲಾದ ಮೂವರನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್.ಪಿ.ಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿ.ಆರ್.ಪಿ) ಬಂಧಿಸಿದ್ದಾರೆ. ಈ ಮೂವರು ಉದ್ದೇಶ ಪೂರ್ವಕವಾಗಿ ಹಳಿಗಳ ಮೇಲೆ ಕಬ್ಬಿಣದ ಸ್ಲೀಪರ್ ಮತ್ತು ಮರದ ದಿಮ್ಮಿಗಳನ್ನು ಇರಿಸಿದ್ದರು.
- ಮೂವರ ಬಂಧನ
- ಅಪಘಾತ ತಪ್ಪಿಸಿದ ಲೋಕೋ ಪೈಲಟ್ ಸಮಯ ಪ್ರಜ್ಞೆ
ಫೋಟೋ- 15ಎಂವೈಎಸ್ 45
ಕನ್ನಡಪ್ರಭ ವಾರ್ತೆ ಮೈಸೂರು
ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ಎಕ್ಸ್ ಪ್ರೆಸ್ ರೈಲು ನಂಜನಗೂಡು ಮತ್ತು ಕಡಕೊಳ ರೈಲ್ವೆ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಪಘಾತಕ್ಕೀಡಾಗಿವುದನ್ನು ಲೋಕೋ ಪೈಲಟ್ ತಪ್ಪಿಸಿದ್ದಾರೆ.
ರೈಲ್ವೆ ಎಂಜಿನ್ ನ ಚಾಲಕನ ಸಮಯಪ್ರಜ್ಞೆಯಿಂದಾಗಿ ಅಪಘಾತ ತಪ್ಪಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ರೈಲನ್ನು ಧ್ವಂಸಗೊಳಿಸುವ ದುರುದ್ದೇಶಪೂರಿತ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸೋಮಯ್ ಮರಾಂಡಿ, ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂದು ಗುರುತಿಸಲಾದ ಮೂವರನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್.ಪಿ.ಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿ.ಆರ್.ಪಿ) ಬಂಧಿಸಿದ್ದಾರೆ. ಈ ಮೂವರು ಉದ್ದೇಶ ಪೂರ್ವಕವಾಗಿ ಹಳಿಗಳ ಮೇಲೆ ಕಬ್ಬಿಣದ ಸ್ಲೀಪರ್ ಮತ್ತು ಮರದ ದಿಮ್ಮಿಗಳನ್ನು ಇರಿಸಿದ್ದರು.
ಇದರಿಂದಾಗಿ ರೈಲನ್ನು ಬಲವಂತವಾಗಿ ನಿಲ್ಲಿಸಬೇಕಾಯಿತು. ಮಾಹಿತಿ ಪಡೆದ ಮೈಸೂರಿನ ರೈಲ್ವೆ ಸಂರಕ್ಷಣಾ ದಳದ ಸಹಾಯಕ ರಕ್ಷಣಾ ಆಯುಕ್ತ ಎಂ.ಎನ್.ಎ. ಖಾನ್, ಪೋಸ್ಟ್ ಕಮಾಂಡರ್ ಕೆ.ವಿ. ವೆಂಕಟೇಶ ಮತ್ತು ಅವರ ತಂಡ, ಆಆರ್‌ಪಿಎಫ್ ಶ್ವಾನ ದಳ ಘಟನಾ ಸ್ಥಳಕ್ಕೆ ಕ್ಷಿಪ್ರವಾಗಿ ತೆರಳಿ ಸಮಯಕ್ಕೆ ಸ್ಪಂದಿಸಿದರು.
ಒಡಿಶಾದ ಮಯೂರ್ ಬಂಜ್ ನ ಬಂಗಿರಿಪೋಸಿದ ಜಲ್ದಿಹಾ ಮೂಲದ ಸೋಮಯ್ ಮರಾಂಡಿ ಎಂಬಾತ ಸ್ಥಳದಲ್ಲಿ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ, ತನ್ನ ಸಹಚರರೊಂದಿಗೆ ಈ ಕೃತ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಮೈಸೂರಿನ ಸರ್ಕಾರಿ ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಘಟನೆಯಿಂದಾಗಿ ರೈಲನ್ನು ಸ್ವಲ್ಪ ಸಮಯದವರೆಗೆ 6.39 ರಿಂದ 6.45 ರವರೆಗೆ ತಡೆಹಿಡಿಯಲಾಯಿತು. ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ಅವರು ರೈಲಿನ ಚಾಲಕನ ಸಮಯೋಚಿತ ಕ್ರಮ ಮತ್ತು ಭದ್ರತಾ ಪಡೆಗಳ ತ್ವರಿತ ಪ್ರತಿಕ್ರಿಯೆ ಶ್ಲಾಘಿಸಿ, ಪ್ರಯಾಣಿಕರ ಯೋಗಕ್ಷೇಮವನ್ನು ವಿಚಾರಿಸಿ, ಕೃತಜ್ಞತೆ ಸಲ್ಲಿಸಿದರು.
ಹಳಿಗಳ ಮೇಲೆ ಇಂತಹ ಕೃತ್ಯದಲ್ಲಿ ತೊಡಗಿ ಪ್ರಯಾಣಿಕರಿಗೆ ದೊಡ್ಡ ಆಪತ್ತು ತರುವ ಮತ್ತು ಜೀವಹಾನಿ ಉಂಟುಮಾಡುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಂತಹ ಚಟುವಟಿಕೆಗಳಲ್ಲಿ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ರೈಲ್ವೆ ಆಡಳಿತವು ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಜೆ. ಲೋಹಿತೇಶ್ವರ ತಿಳಿಸಿದ್ದಾರೆ.
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.