2-3 ದಿನದಲ್ಲಿ ಬೀದರ್‌ ಎಟಿಎಂ ಲೂಟಿಕೋರರ ಬಂಧನ - ಆರೋಪಿಗಳು ಉ.ಪ್ರದೇಶದಲ್ಲಿ : ಪರಂ

Published : Jan 21, 2025, 10:43 AM IST
Dr G parameshwar

ಸಾರಾಂಶ

ಬೀದರ್‌ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಎಟಿಎಂಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ ಹಣ ಲೂಟಿ ಪ್ರಕರಣ ಇನ್ನು ಎರಡು ಮೂರು ದಿನದಲ್ಲಿ ಭೇದಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

 ಬೆಳಗಾವಿ : ಬೀದರ್‌ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಎಟಿಎಂಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ ಹಣ ಲೂಟಿ ಪ್ರಕರಣ ಇನ್ನು ಎರಡು ಮೂರು ದಿನದಲ್ಲಿ ಭೇದಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್ ಎಸ್‌ಬಿಐ ಹಣ ಲೂಟಿ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದೆ. ಉತ್ತರ ಪ್ರದೇಶದಲ್ಲಿ ಆರೋಪಿಗಳಿದ್ದಾರೆಂಬ ಮಾಹಿತಿ ಇದೆ ಎಂದು ತಿಳಿಸಿದರು.

ಇದೇ ವೇಳೆ ಮಂಗಳೂರಿನ ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಕುರಿತು ಮಾತನಾಡಿದ ಸಚಿವ ಪರಮೇಶ್ವರ್‌, ‘ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಬಂಧಿಸಲಾಗಿದೆ. ನಾಲ್ಕು ಕೆಜಿ ಚಿನ್ನಾಭರಣ ಸೇರಿ ₹4 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ತಮಿಳುನಾಡಿನ ತಿರುನಲ್ವೇಲಿ ಬಳಿ ಆರೋಪಿಗಳ ಬಂಧನವಾಗಿದೆ. ವಿಚಾರಣೆ ನಡೆಯುತ್ತಿದೆ. ಪ್ರಕರಣದಲ್ಲಿ ಆರು ಜನ ಶಾಮೀಲಾಗಿದ್ದಾರೆ ಎಂಬ ಮಾಹಿತಿ ಇದೆ’ ಎಂದು ಸಚಿವರು ತಿಳಿಸಿದರು.

PREV

Recommended Stories

ಮಹಿಳೆಯರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು
ನಾಯಿ ರಕ್ಷಣೆಗೆ ರಸ್ತೆ ಬದಿ ನಿಂತಿದ್ದ ಯುವತಿ ಮೈಮುಟ್ಟಿ ಇಂಜಿನಿಯರ್‌ ದುರ್ವರ್ತನೆ : ಬಂಧನ