ಕನ್ನಡಪ್ರಭ ವಾರ್ತೆ ಬೆಂಗಳೂರು
ಮಮತಾ ದೇವಿ ಮೂಲತಃ ಬಿಹಾರ ರಾಜ್ಯದವಳಾಗಿದ್ದು, ದೇವನಹಳ್ಳಿ ಹತ್ತಿರ ಅಪಾರ್ಟ್‌ಮೆಂಟ್‌ನಲ್ಲಿ ಸ್ವಚ್ಛತಾ ವಿಭಾಗದಲ್ಲಿ ಆಕೆ ಕೆಲಸ ಮಾಡುತ್ತಿದ್ದಳು. ಹಣದಾಸೆಗೆ ಬಿದ್ದು ಗಾಂಜಾ ಮಾರಾಟ ದಂಧೆಯಲ್ಲಿ ಮಮತಾ ತೊಡಗಿದ್ದಳು. ತನ್ನೂರಿನಿಂದ ಕಡಿಮೆ ಬೆಲೆಗೆ ಗಾಂಜಾ ತಂದು ನಗರದಲ್ಲಿ ಹೆಚ್ಚಿನ ಬೆಲೆಗೆ ಆಕೆ ಬಿಕರಿ ಮಾಡುತ್ತಿದ್ದಳು. ಕಳೆದ ಎರಡು ತಿಂಗಳಿಂದ ಆಕೆ ವ್ಯವಹಾರ ನಡೆಸಿದ್ದಳು ಎಂಬ ಮಾಹಿತಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ
-ಬಾಕ್ಸ್-2.40 ಕೋಟಿ ಗಾಂಜಾ ಜಪ್ತಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ 2.40 ಕೋಟಿ ರು. ಮೌಲ್ಯದ ಹೈಡ್ರೋ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೆಐಎಗೆ ಬ್ಯಾಂಕಾಕ್‌ನಿಂದ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಪ್ರತ್ಯೇಕವಾಗಿ ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು, ಈ ಆರೋಪಿಗಳಿಂದ 2.40 ಕೋಟಿ ರು ಮೌಲ್ಯದ 6 ಕೆಜಿ ಹೈಡ್ರೋ ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.