ಒಣಗಿದ ಮರದ ಕೊಂಬೆ ತಲೆಗೆ ಬಿದ್ದು ಬೈಕ್‌ ಸವಾರ ಐಸಿಯುಗೆ ದಾಖಲು

KannadaprabhaNewsNetwork |  
Published : Jun 27, 2026, 03:30 AM ISTUpdated : Jun 27, 2026, 04:28 AM IST
Bengaluru Road

ಸಾರಾಂಶ

ಒಣಗಿದ ಮರದ ಕೊಂಬೆಯೊಂದು ಮುರಿದು ತಲೆ ಮೇಲೆ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ ನಡೆದಿದೆ. ಗಾಯಗೊಂಡಿರುವ ಸತೀಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 ಬೆಂಗಳೂರು : ಒಣಗಿದ ಮರದ ಕೊಂಬೆಯೊಂದು ಮುರಿದು ತಲೆ ಮೇಲೆ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ ನಡೆದಿದೆ. ಗಾಯಗೊಂಡಿರುವ ಸತೀಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಫೈನಾನ್ಸ್ ಹಣವನ್ನು ಸಂಗ್ರಹಿಸಲು  ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬಿದ್ದಿದೆ

ಫೈನಾನ್ಸ್ ಹಣವನ್ನು ಸಂಗ್ರಹಿಸಲು ಸತೀಶ್ ಅವರು ಬುಧವಾರ ಸಂಜೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮರದ ದೊಡ್ಡ ಕೊಂಬೆಯೊಂದು ತಲೆಯ ಮೇಲೆ ಬಿದ್ದಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಸತೀಶ್ ಅವರು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದು, ಕೂಡಲೇ ಅವರನ್ನು ಸ್ಥಳೀಯರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರದ ಕೊಂಬೆ ತಲೆ ಮೇಲೆ ಬಿದ್ದಾಗ ಸವಾರ ಸತೀಶ್ ಅವರು ಹೆಲ್ಮೆಟ್ ಧರಿಸಿರಲಿಲ್ಲ. ಒಂದು ವೇಳೆ ಹೆಲ್ಮೆಟ್ ಧರಿಸಿದ್ದಿದ್ದರೆ ತಲೆಗೆ ಹೆಚ್ಚಿನ ಗಾಯವಾಗುವುದು ತಪ್ಪಿಸಬಹುದಿತ್ತು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಸಾರ್ವಜನಿಕರ ಆಕ್ರೋಶ:  

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಪಾಲಿಕೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಾಯಕಾರಿ ಆಗಿರುವ ಮರಗಳು ಆಗಾಗ ಬೀಳುತ್ತಲೇ ಇರುತ್ತವೆ. ಇತ್ತೀಚೆಗೆ ಸುರಿದ ಮಳೆಯಿಂದ ರಾಜಾಜಿನಗರದಲ್ಲಿ ಮರದ ಕೊಂಬೆ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿನ ಎಲ್ಲ ದುರ್ಬಲ ಮರಗಳನ್ನು ಪರಿಶೀಲಿಸಲು ಕೋರಲಾಗಿತ್ತು. ಆದರೂ, ಪಾಲಿಕೆಯವರು ನಿರ್ಲಕ್ಷ್ಯ ತೋರಿದ ಕಾರಣ ಘಟನೆ ಸಂಭವಿಸಿದೆ ಎಂದು ದೂರಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಕಾಮಗಾರಿಗಾಗಿ ತೆಗೆದಿದ್ದ ಗುಂಡಿಗೆ ಬಿದ್ದು ಗಾಯಗೊಂಡ ಬೈಕ್ ಸವಾರ
ಮಹಿಳೆ ಮೇಲೆ ದೌರ್ಜನ್ಯ: ಅಪರಾಧಿಗಳಿಗೆ ದಂಡ