ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು

Published : Sep 02, 2024, 12:23 PM IST
Crime

ಸಾರಾಂಶ

ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ 47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಂಗಳೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಭಾನುವಾರ ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸುಮಾರು 47 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ.

ಬೆಂಗಳೂರಿನ ಪೈ ವಿಸ್ತಾ ಹೊಟೇಲ್‌ನಲ್ಲಿ 2023ರ ಜೂನ್‌ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ. ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಅರುಣ್‌ ಕುಮಾರ್‌ ಪುತ್ತಿಲ ವಿರುದ್ಧ ಮಹಿಳೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಪಿಸಿ ಕಲಂ 417, 354 ಎ, 506 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆ ಮಾಡಿದ್ದ ಅರುಣ್‌ ಪುತ್ತಿಲ

ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಇದೇ ವೇಳೆ ಅರುಣ್‌ ಪುತ್ತಿಲರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಫಿದಾ ಆಗಿದ್ದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅರುಣ್‌ ಪುತ್ತಿಲರ ಅಭಿಮಾನಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಅರುಣ್‌ ಪುತ್ತಿಲ ಮತ್ತು ಮಹಿಳೆಯೊಬ್ಬರ ಆಡಿಯೋ ವೈರಲ್ ಆಗಿತ್ತು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ವಿಚ್ಛೇದಿತ ಪತ್ನಿ, ಮಗಳ ಮೇಲೆಯೇ ಆ್ಯಸಿಡ್‌ ದಾಳಿ
ಡ್ರಗ್ಸ್‌ ನೀಡಿ 50 ಮಹಿಳೆಯರ ರೇಪ್‌ ಮಾಡಿದ್ದ ಜ್ಯೋತಿಷಿ ಸೆರೆ!