ಮಹಿಳಾ ಕಸ್ಟಮ್ಸ್ ಅಧಿಕಾರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಠಾಣೆ ಪೊಲೀಸರಿಂದ ಬಂಧಿತನಾಗಿರುವ ಆರೋಪಿ ಕೃಪಲಾನಿ(36) ಬ್ಲ್ಯಾಕ್‌ಮೇಲ್ ಮಾಡಿ ಹಲವು ಮಹಿಳೆಯರಿಗೆ ವಂಚಿಸಿರುವುದು ತನಿಖೆ ವೇಳೆ ಪತ್ತೆಯಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಹಿಳಾ ಕಸ್ಟಮ್ಸ್ ಅಧಿಕಾರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಠಾಣೆ ಪೊಲೀಸರಿಂದ ಬಂಧಿತನಾಗಿರುವ ಆರೋಪಿ ಕೃಪಲಾನಿ(36) ಬ್ಲ್ಯಾಕ್‌ಮೇಲ್ ಮಾಡಿ ಹಲವು ಮಹಿಳೆಯರಿಗೆ ವಂಚಿಸಿರುವುದು ತನಿಖೆ ವೇಳೆ ಪತ್ತೆಯಾಗಿದೆ.
ಆರೋಪಿ ಕೃಪಲಾನಿ ಮಹಿಳಾ ಕಸ್ಟಮ್ಸ್ ಅಧಿಕಾರಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ, ಆಕೆಯನ್ನು ಆರೇಳು ವರ್ಷಗಳಿಂದ ಲೈಂಗಿಕವಾಗಿ ಬಳಸಿಕೊಂಡಿದ್ದ. ಈ ಸಂಬಂಧ ಆಕೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿ ಸುಮಾರು 50ಕ್ಕೂ ಹೆಚ್ಚು ಅಧಿಕಾರಿಗಳನ್ನು ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ. ಮಹಿಳಾ ಅಧಿಕಾರಿಗಳ ಜತೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ಮಾಡಿ ನಂತರ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಆ ಮೂಲಕ ತನ್ನ ಕುಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಎಸ್‌ಟಿ, ಕಸ್ಟಮ್ಸ್ ಅಧಿಕಾರಿಗಳೇ ಟಾರ್ಗೆಟ್:
ಆರೋಪಿ ಕೃಪಲಾನಿ ಜಿಎಸ್‌ಟಿ ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಆರಂಭದಲ್ಲಿ ಕೆಲಸದ ನಿಮಿತ್ತ ಅಧಿಕಾರಿಗಳೊಂದಿಗೆ ಸಲುಗೆ ಬೆಳೆಸುತ್ತಿದ್ದ ಈತ, ಬಳಿಕ ಡಿನ್ನರ್, ಲಂಚ್ ಮಾಡುವ ನೆಪದಲ್ಲಿ ಆಪ್ತನಾಗುತ್ತಿದ್ದ. ನಂತರ ಪ್ರೀತಿ ಮತ್ತು ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸುತ್ತಿದ್ದ. ನಂತರ ದೈಹಿಕ ಸಂಪರ್ಕದ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂಬುದು ವಿಚಾರಣೆಯಲ್ಲಿ ತಿಳಿದು ಬಂದಿದೆ.
ಬಾಕ್ಸ್...
ಪುರುಷ ಅಧಿಕಾರಿಗಳಿಗೂ ಬ್ಲ್ಯಾಕ್‌ಮೇಲ್ !
ಆರೋಪಿಯು ಪುರುಷ ಅಧಿಕಾರಿಗಳನ್ನೂ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಮೊದಲು ಅಧಿಕಾರಿಗಳ ಕಾರ್ಯವೈಖರಿ ಮತ್ತು ಇಲಾಖೆಯ ಒಳಗಿನ ಲೋಪದೋಷಗಳನ್ನು ತಿಳಿದುಕೊಳ್ಳುತ್ತಿದ್ದ. ಅದನ್ನು ಇಟ್ಟುಕೊಂಡು ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದನು.
ಪೊಲೀಸರ ಮೊಬೈಲ್ ಕಸಿದು ಪ್ರಾಣ ಬೆದರಿಕೆ!
ಪೊಲೀಸರ ವಿಚಾರಣೆ ವೇಳೆಯೂ ಈತ ಉದ್ಧಟತನ ತೋರಿದ್ದಾನೆ. ವೈದ್ಯಕೀಯ ಪರೀಕ್ಷೆ ಮಾಡಿಸಲು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ರಂಪಾಟ ಮಾಡಿದ್ದಾನೆ. ಪೊಲೀಸರ ಮೊಬೈಲ್ ಕಸಿದುಕೊಂಡು ಅವಾಚ್ಯವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ವಿ.ವಿ. ಪುರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- ಆರೋಪಿ ಕೃಪಲಾನಿ ಜಿಎಸ್‌ಟಿ ಮತ್ತು ಕಸ್ಟಮ್ಸ್ ಮಹಿಳಾ ಅಧಿಕಾರಿಗಳೇ ಟಾರ್ಗೆಟ್ - ಆರಂಭದಲ್ಲಿ ಸಲುಗೆ ಬೆಳೆಸಿಕೊಂಡು ಬಳಿಕ ಡಿನ್ನರ್, ಲಂಚ್ ನೆಪದಲ್ಲಿ ಆಪ್ತನಾಗುತ್ತಿದ್ದ- ನಂತರ ಅವರೊಡನೆ ಪ್ರೇಮ, ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸುತ್ತಿದ್ದ-ನಂತರ ದೈಹಿಕ ಸಂಪರ್ಕದ ಫೋಟೋ,ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.