ಹೊರರಾಜ್ಯಗಳಿಂದ ಡ್ರಗ್ಸ್‌ ತಂದು ಮಾರುತ್ತಿದ್ದವನ ಸೆರೆ

KannadaprabhaNewsNetwork |  
Published : Feb 26, 2024, 01:30 AM IST
ಗಾಂಜಾ | Kannada Prabha

ಸಾರಾಂಶ

ಹೊರರಾಜ್ಯಗಳಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನೊಬ್ಬನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಹೊರರಾಜ್ಯಗಳಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನೊಬ್ಬನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುದ್ದಗುಂಟೆಪಾಳ್ಯದ ಸತ್ಯನಾರಾಯಣ ಮಹತೋ(25) ಬಂಧಿತ. ಈತನಿಂದ ₹24 ಸಾವಿರ ಮೌಲ್ಯದ 410 ಗ್ರಾಂ ಗಾಂಜಾ, ಒಂದು ಮೊಬೈಲ್‌ ಫೋನ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಡಕಾಯಿತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮೊನೀಷ್‌ ಎಂಬಾತ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

ಬಿಹಾರ ಮೂಲದ ಸತ್ಯನಾರಾಯಣ ಮಹತೋ ಉದ್ಯೋಗ ಅರಸಿ ನಗರಕ್ಕೆ ಬಂದು ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದ. ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಮಾದಕವಸ್ತು ಮಾರಾಟಕ್ಕೆ ಇಳಿದಿದ್ದ. ಹೊರರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ನಗರಕ್ಕೆ ತಂದು ಪರಿಚಿತ ಗಿರಾಕಿಗಳಿಗೆ ದುಬಾರಿ ಹಣಕ್ಕೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಚಿನ್ನದ ವ್ಯಾಪಾರಿಗೆ ವಂಚಿಸಿದ್ದವನ ಬಂಧನ: ₹15 ಲಕ್ಷ ಮೌಲ್ಯದ 100 ಗ್ರಾಂ ಬಂಗಾರ ವಶ
ದರ್ಶನ್‌ ಪತ್ನಿಗೆ ಅಶ್ಲೀಲ ಸಂದೇಶ ಕಳಿಸಿದ್ದ ಟೆಕಿ, ರಿಕ್ಷಾ ಚಾಲಕ ಅರೆಸ್ಟ್‌