ಗಾಂಜಾ ದಂಧೆ ನಡೆಸುತ್ತಿದ್ದ ಕಾಲ್‌ ಸೆಂಟರ್‌ ನೌಕರ ಸೆರೆ

KannadaprabhaNewsNetwork |  
Published : Oct 09, 2024, 01:43 AM IST
kuppan | Kannada Prabha

ಸಾರಾಂಶ

ಕಾಲ್‌ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಗಾಂಜಾ ಮಾರಾಟ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದಲ್ಲಿ ಗಾಂಜಾ ಮಾರಾಟ ದಂಧೆ ಮಾಡುತ್ತಿದ್ದ ಕಾಲ್‌ ಸೆಂಟರ್ ಉದ್ಯೋಗಿ ಸೇರಿದಂತೆ ಇಬ್ಬರನ್ನು ಎಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿ, ₹13 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮಂಗಮ್ಮನಪಾಳ್ಯದ ದಿನೇಶ್ ಹಾಗೂ ಕುಪ್ಪನ್ ಬಂಧಿತ ಆರೋಪಿಗಳಾಗಿದ್ದಾರೆ. ಇತ್ತೀಚೆಗೆ ಎಚ್‌ಎಸ್‌ಆರ್ ಲೇಔಟ್‌ನ 7ನೇ ಹಂತದ ಸಲಾರ್‌ಪುರಿ ಅಪಾರ್ಟ್‌ಮೆಂಟ್ ಬಳಿ ಗಾಂಜಾ ಮಾರಾಟಕ್ಕೆ ಆರೋಪಿಗಳು ಹೊಂಚು ಹಾಕಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರೋಪಿಗಳಾದ ದಿನೇಶ್ ಹಾಗೂ ಕುಪ್ಪನ್ ಮೂಲತಃ ತಮಿಳುನಾಡು ರಾಜ್ಯದವರಾಗಿದ್ದು, ಹಲವು ದಿನಗಳಿಂದ ನಗರದಲ್ಲಿ ನೆಲೆಸಿದ್ದರು. ಖಾಸಗಿ ಕಾಲ್ ಸೆಂಟರ್‌ನಲ್ಲಿ ದಿನೇಶ್ ಹಾಗೂ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕುಪ್ಪನ್ ಗಾರೆ ಕೆಲಸಗಾರನಾಗಿದ್ದ. ಹಣದಾಸೆಗೆ ತಮಿಳುನಾಡಿನಿಂದ ಕಡಿಮೆ ಬೆಲೆ ಗಾಂಜಾವನ್ನು ತಂದು ನಗರದಲ್ಲಿ ದುಬಾರಿಗೆ ಬೆಲೆಗೆ ಆರೋಪಿಗಳು ಮಾರುತ್ತಿದ್ದರು. ಕೆಲ ದಿನಗಳ ಹಿಂದೆ ಈ ಇಬ್ಬರ ಚಟುವಟಿಕೆ ಬಗ್ಗೆ ಮಾಹಿತಿ ಸಿಕ್ಕಿತು. ಈ ಸುಳಿವು ಆಧರಿಸಿ ಪೊಲೀಸರು ಮಾಲಿನ ಸಮೇತ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಬೈಕಿಗೆ ಬಸ್‌ ತಾಕಿ ರಸ್ತೆಗೆ ಬಿದ್ದಾಗಕಾರು ಡಿಕ್ಕಿಯಾಗಿ ಮಹಿಳೆ ಸಾವುಕನ್ನಡಪ್ರಭ ವಾರ್ತೆ ಬೆಂಗಳೂರುದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್‌ ತಗುಲಿ ರಸ್ತೆಗೆ ಬಿದ್ದ ಮಹಿಳೆಗೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಕೊಂಚ ದೂರ ಎಳೆದೊಯ್ದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾರುಣ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಉಲ್ಲಾಳ ಉಪನಗರ ನಿವಾಸಿ ಮೋನಿಕಾ (28) ಮೃತ ದುರ್ದೈವಿ. ಮಂಗಳವಾರ ಬೆಳಗ್ಗೆ ಸುಮಾರು 9.50ಕ್ಕೆ ಉಲ್ಲಾಳ ಉಪನಗರದ ಕೆರೆ ಸಮೀಪದ 80 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.ಖಾಸಗಿ ಬೈಕ್ ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಬೆಳಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಉಲ್ಲಾಳ ಉಪನಗರದ ಕೆರೆ ಬಳಿಯ 80 ಅಡಿ ರಸ್ತೆಯಲ್ಲಿ ತೆರಳುವಾಗ ಅತಿವೇಗದಿಂದ ಬಂದ ಬಿಎಂಟಿಸಿ ಬಸ್‌, ದ್ವಿಚಕ್ರ ವಾಹನಕ್ಕೆ ತಾಕಿದೆ. ಇದರಿಂದ ನಿಯಂತ್ರಣ ತಪ್ಪಿ ಮೋನಿಕಾ ರಸ್ತೆಗೆ ಬಿದ್ದಿದ್ದಾರೆ. ಇದೇ ಸಮಯಕ್ಕೆ ಹಿಂದಿನಿಂದ ಬರುತ್ತಿದ್ದ ಕಾರೊಂದು ಮೋನಿಕಾಗೆ ಡಿಕ್ಕಿಯಾಗಿ ಕೊಂಚ ದೂರ ಎಳೆದೊಯ್ದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು, ಸ್ಥಳ ಪರಿಶೀಲಿಸಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಿಎಂಟಿಸಿ ಬಸ್‌, ಕಾರು ಹಾಗೂ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

Recommended Stories

ಜಮೀನು ಅಕ್ರಮ ಪರಭಾರೆ: ಇಬ್ಬರ ಬಂಧನ
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!