ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಎಚ್.ಭೂವನಹಳ್ಳಿ ರಾಮಕೃಷ್ಣೇಗೌಡ (59) ಸಾವನ್ನಪ್ಪಿರುವ ದುರ್ದೈವಿ ಮುಖ್ಯಶಿಕ್ಷಕ.
ತಾಲೂಕಿನ ಇಜ್ಜಲಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ರಾಮಕೃಷ್ಣೇಗೌಡ ಕರ್ತವ್ಯ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ನಾಗಮಂಗಲದಿಂದ - ಮೈಸೂರು ಕಡೆಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.ಸುದ್ದಿ ತಿಳಿಯುತ್ತಿದ್ದಂತೆ ನಾಗಮಂಗಲ ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಬಳಿಕ ರಾಮಕೃಷ್ಣೇಗೌಡರ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ಗೊಳಪಡಿಸಿದ್ದಾರೆ.
ಕಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ: ಇಬ್ಬರಿಗೆ ಗಾಯಮಳವಳ್ಳಿ: ನಿಂತಿದ್ದ ಕಾರಿಗೆ ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಮೈಸೂರು ರಸ್ತೆ ಬದಿಯಲ್ಲಿ ನಡೆದಿದೆ.ತಾಲೂಕಿನ ರಾಗಿಬೊಮ್ಮನಹಳ್ಳಿಯ ಕೆಂಪಯ್ಯ ಮತ್ತು ಮಂಗಳಮ್ಮ ಗಾಯಗೊಂಡವವರು. ಮಂಗಳವಾರ ರಾಗಿಬೊಮ್ಮನಹಳ್ಳಿ ಗ್ರಾಮದ ಒಂದೇ ಕುಟುಂಬದ ಆರೇಳು ಮಂದಿ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸ್ ಪಟ್ಟಣಕ್ಕೆ ಬಂದು ಮೈಸೂರು ರಸ್ತೆ ಬದಿಯಲ್ಲಿ ಹಣ್ಣು ಖರೀದಿಗೆ ಕಾರು ನಿಲ್ಲಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಸಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಕೆಂಪಯ್ಯ ಮತ್ತು ಮಂಗಳಮ್ಮ ಎಂಬುವವರಿಗೆ ಗಾಯವಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಥಳಕ್ಕೆ ಪಟ್ಟಣದ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಎಸ್ ಅರ್ ಟಿಸಿ ಬಸ್ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪಟ್ಟಣದ ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧ ಉಲ್ಲಂಘಿಸಿ ವ್ಹೀಲಿಂಗ್ ಬೈಕ್ ಚಾಲಕ ವಿರುದ್ಧ ಪ್ರಕರಣ ದಾಖಲುಮದ್ದೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನಗಳ ಸಂಚಾರ ನಿಷೇಧ ಉಲ್ಲಂಘಿಸಿ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡಲು ಹೋಗಿ ಸ್ವಯಂ ಅಪಘಾತಕ್ಕೊಳಗಾಗಿದ್ದ ಬೈಕ್ ಚಾಲಕನ ವಿರುದ್ಧ ಮದ್ದೂರು ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತಾಲೂಕಿನ ದುಂಡನಹಳ್ಳಿಯ ಬೊಮ್ಮಲಿಂಗಯ್ಯನ ಪುತ್ರ ಹರ್ಷ ಅಲಿಯಾಸ್ ಹರೀಶ (22) ಅಪಘಾತದಲ್ಲಿ ಗಾಯಗೊಂಡಿರುವ ಬೈಕ್ ಚಾಲಕ.