ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: ತಾಯಿ, ಮಗನಿಗೆ ತೀವ್ರ ಗಾಯ

KannadaprabhaNewsNetwork | Published : Oct 31, 2024 1:01 AM

ಸಾರಾಂಶ

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಇತರೆ ವಾಹನಗಳ ಸಂಚಾರಕ್ಕೆ ಕೆಲಕಾಲ ಅಡಚಣೆಯಾಗಿತ್ತು. ನಂತರ ಸ್ಥಳಕ್ಕೆ ಧಾವಿಸಿದ ಸಂಚಾರಿ ಠಾಣೆ ಪಿಎಸ್ಐ ರಾಮಸ್ವಾಮಿ ಹಾಗೂ ಸಿಬ್ಬಂದಿ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮದ್ದೂರು:

ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿಯಾಗಿ ತಾಯಿ ಮತ್ತು ಮಗ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಜರುಗಿದೆ.

ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿಗಳಾದ ಸೌಭಾಗ್ಯ ಹಾಗೂ ನಿಖಿಲ್ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮಂಡ್ಯ ಆಸ್ಪತ್ರೆ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೌಭಾಗ್ಯ ಮತ್ತು ನಿಖಿಲ್ ತಮ್ಮ ಕಿಯಾ ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದರು. ಗೆಜ್ಜಲಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಖಿಲ್ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಗ್ಯಾಸ್ ಸಿಲೆಂಡರ್ ಸಾಗಿಸುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಇತರೆ ವಾಹನಗಳ ಸಂಚಾರಕ್ಕೆ ಕೆಲಕಾಲ ಅಡಚಣೆಯಾಗಿತ್ತು. ನಂತರ ಸ್ಥಳಕ್ಕೆ ಧಾವಿಸಿದ ಸಂಚಾರಿ ಠಾಣೆ ಪಿಎಸ್ಐ ರಾಮಸ್ವಾಮಿ ಹಾಗೂ ಸಿಬ್ಬಂದಿ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಡಿವೈಎಸ್ಪಿ ಕೃಷ್ಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪತ್ರಿಕೆ ವಿತರಕ ಬಿ.ಸುರೇಶ್‌ ತಂದೆ ನಿಧನ

ಮಂಡ್ಯ:

ನಗರದ ಹೊಸಹಳ್ಳಿ ನಿವಾಸಿ ಹಾಗೂ ಪತ್ರಿಕಾ ವಿತರಕರಾದ ಬಿ.ಸುರೇಶ್‌ ಅವರ ತಂದೆ ಬಸವೇಗೌಡ ಹನಿಯಂಬಾಡಿ (76) ಅವರು ಮಂಗಳವಾರ ರಾತ್ರಿ ನಿಧನರಾದರು. ಪತ್ನಿ ಶಾರದಮ್ಮ, ಸುರೇಶ್‌ ಸೇರಿದಂತೆ ಮೂರು ಗಂಡು ಮಕ್ಕಳಿದ್ದರು. ಹಾಲಹಳ್ಳಿಯ ರುದ್ರಭೂಮಿಯಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬ ಮೂಲ ತಿಳಿಸಿದೆ.

Share this article