ಕ್ಯಾಂಟರ್‌ಗೆ ಕಾರು ಡಿಕ್ಕಿ: ಐಟಿ ಕಂಪನಿ ಮಹಿಳಾ ಉದ್ಯೋಗಿ ಸಾವು

KannadaprabhaNewsNetwork |  
Published : Nov 10, 2026, 12:30 AM IST
9ಕೆಎಂಎನ್ ಡಿ11 | Kannada Prabha

ಸಾರಾಂಶ

ಕ್ಯಾಂಟರ್‌ಗೆ ಕಾರು ಡಿಕ್ಕಿಯಾಗಿ ಐಟಿ ಕಂಪನಿ ಮಹಿಳಾ ಉದ್ಯೋಗಿ ಮೃತಪಟ್ಟು, ಸಹೋದ್ಯೋಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಸಮೀಪ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗಿನ ಜಾವ ಜರುಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಕ್ಯಾಂಟರ್‌ಗೆ ಕಾರು ಡಿಕ್ಕಿಯಾಗಿ ಐಟಿ ಕಂಪನಿ ಮಹಿಳಾ ಉದ್ಯೋಗಿ ಮೃತಪಟ್ಟು, ಸಹೋದ್ಯೋಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಸಮೀಪ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗಿನ ಜಾವ ಜರುಗಿದೆ.

ಹಾಸನ ಜಿಲ್ಲೆ ಹಿರಿಸಾವೆಯ ತೂಬಿನಕೆರೆ ಗ್ರಾಮದ ಅಶೋಕ ಅವರ ಪುತ್ರಿ ಟಿ.ಎ.ಅಮೃತ (21) ಮೃತಪಟ್ಟ ಐಟಿ ಉದ್ಯೋಗಿ. ಅಪಘಾತದಲ್ಲಿ ತಲೆಗೆ ಬಿದ್ದ ಪೆಟ್ಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಈಕೆಯನ್ನು ಮದ್ದೂರು, ಮಂಡ್ಯ ಆಸ್ಪತ್ರೆ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೆಲ ಗಂಟೆಗಳ ನಂತರ ಕೊನೆ ಉಸಿರೆಳೆದಿದ್ದಾರೆ.

ಈಕೆಯೊಂದಿಗೆ ಕಾರು ಚಾಲನೆ ಮಾಡುತ್ತಿದ್ದ ಸ್ನೇಹಿತೆ, ಸಹೋದ್ಯೋಗಿ ಲಿಖಿತ ಯಾವುದೇ ಗಾಯಗಳಿಲ್ಲದೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾರ್ಯ ನಿಮಿತ್ತ ಅಮೃತ ಮತ್ತು ಲಿಖಿತ ಭಾನುವಾರ ಬೆಳಗಿನ ಜಾವ ಬೆಂಗಳೂರಿನಿಂದ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದರು.

ಬೆಂಗಳೂರು-ಮೈಸೂರು ಹೆದ್ದಾರಿಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಳಗಿನ ಜಾವ ಮೂರರಿಂದ ನಾಲ್ಕು ಗಂಟೆ ಸುಮಾರಿಗೆ ಮುಂದೆ ಹೋಗುತ್ತಿದ್ದ ಕ್ಯಾಂಟರ್ ಚಾಲಕ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದಾಗ ಕಾರು ಕ್ಯಾಂಟರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಕ್ಯಾಂಟರನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ: ಪತಿ, ಅತ್ತೆಯ ಸೆರೆ
ಪತಿಯನ್ನು ಕೊಂದು ಹೃದಯಾಘಾತ ಕಥೆ ಕಟ್ಟಿದ್ದಳು!