ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದ ಕಾರು: ಬೆಂಗಳೂರಿನ ಇಬ್ಬರು ಸಾವು

KannadaprabhaNewsNetwork |  
Published : Mar 05, 2024, 01:40 AM IST
ಅಪಘಾತ... | Kannada Prabha

ಸಾರಾಂಶ

ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಬೆಂಗಳೂರಿನ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ವಾಸುವಳ್ಳಿ ಬಳಿ ಭಾನುವಾರ ರಾತ್ರಿ ನಡೆದಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಬೆಂಗಳೂರಿನ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ವಾಸುವಳ್ಳಿ ಬಳಿ ಭಾನುವಾರ ರಾತ್ರಿ ನಡೆದಿದೆ.

ಬೆಂಗಳೂರಿನ ಗೋವಿಂದರಾಜ ನಗರದ ಹೇಮಂತ್ ಯಾದವ್ (17) ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಗಾಯಗೊಂಡಿದ್ದ ದರ್ಶನ್ (21) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನ ಸಿದ್ದಪ್ಪಾಜಿ ದೇವಸ್ಥಾನಕ್ಕೆ ಸ್ನೇಹಿತರಾದ ಮಹದೇವ್, ಶ್ರೀನಿವಾಸ (ಚಾಲಕ), ಹೇಮಂತ್ ಯಾದವ್, ದರ್ಶನ್, ತೇಜಸ್, ಅಭಿಷೇಕ್, ಉಮೇಶ್ ತೆರಳಿ ವಾಪಾಸ್ ಬೆಂಗಳೂರಿಗೆ ಹೋಗುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರಿಗೆ ಕೈ, ಕಾಲು, ಮುಖಕ್ಕೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯಲ್ಲಿ ಕಾರಿನಲ್ಲಿದ್ದ ತೇಜಸ್, ಮಹದೇವ್, ಶ್ರೀನಿವಾಸ್, ಮತ್ತು ಅಭಿಷೇಕ್‌ಗೆ ಗಂಭೀರವಾಗಿ ಗಾಯವಾಗಿವೆ. ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- - -

ಬೈಕ್‌ ವ್ಹೀಲಿಂಗ್‌: ಅಪ್ರಾಪ್ತ ಸೇರಿ ಮೂವರು ವಶಕ್ಕೆಕನ್ನಡಪ್ರಭ ವಾರ್ತೆ ಬೆಂಗಳೂರುಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುತ್ತಿದ್ದ ಅಪ್ರಾಪ್ತ ಸೇರಿ ಮೂವರು ಸವಾರರನ್ನು ಕೆ.ಆರ್‌.ಪುರ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.ಭಟ್ಟರಹಳ್ಳಿ ಮತ್ತು ಟಿ.ಸಿ.ಪಾಳ್ಯ ಮುಖ್ಯರಸ್ತೆಗಳಲ್ಲಿ ಪೊಲೀಸರು ಗಸ್ತು ಮಾಡುವಾಗ ವ್ಹೀಲಿಂಗ್‌ ಮಾಡುತ್ತಿದ್ದ ವೇಳೆ ಮೂವರನ್ನು ವಶಕ್ಕೆ ಪಡೆದು ಮೂರು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.ಈ ಮೂವರು ಸವಾರರ ಪೈಕಿ ಇಬ್ಬರು ವಯಸ್ಕರಾಗಿದ್ದು, ಪ್ರತ್ಯೇಕ ಪ್ರಕರಣ ದಾಖಸಲಾಗಿದೆ. ಮತ್ತೋರ್ವ ಅಪ್ರಾಪ್ತನಾಗಿರುವ ಹಿನ್ನೆಲೆಯಲ್ಲಿ ಆತನ ಪೋಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!
15 ವರ್ಷಗಳಿ ಸುವರ್ಣನ್ಯೂಸ್, ಕನ್ನಡಪ್ರಭದಲ್ಲಿ ಕೆಲಸ ಮಾಡುತ್ತಿದ್ದ ಮಹಿ‍ಳೆ ಅಪಘಾತದಲ್ಲಿ ದಾರುಣ ಸಾವು