ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಸಾವು

KannadaprabhaNewsNetwork | Updated : Mar 02 2025, 04:20 AM IST

ಸಾರಾಂಶ

ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಸಕ್ಕರೆ ಕಂಪನಿ ನಿವೃತ್ತ ನೌಕರ ಬಿ.ಆರ್.ವೆಂಕಟೇಶ್ ಪುತ್ರ ಮನು (37) ಮೃತಪಟ್ಟ ಕಾರು ಚಾಲಕ .

  ಮದ್ದೂರು :  ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬೋರಾಪುರ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ಜರುಗಿದೆ.ತಾಲೂಕಿನ ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಸಕ್ಕರೆ ಕಂಪನಿ ನಿವೃತ್ತ ನೌಕರ ಬಿ.ಆರ್.ವೆಂಕಟೇಶ್ ಪುತ್ರ ಮನು (37) ಮೃತಪಟ್ಟ ಕಾರು ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮನು ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ.

ಬೆಂಗಳೂರಿನ ಎನ್ ಟಿಡಿ ಡೇಟಾ ಕಂಪನಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮನು ಪತ್ನಿ ಸೌಮ್ಯ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಕಂಪನಿಗೆ ಶನಿವಾರ ರಜೆ ಇದ್ದ ಕಾರಣ ಸ್ವಗ್ರಾಮ ಕೆ.ಎಂ.ದೊಡ್ಡಿಗೆ ತಮ್ಮ ಕಾರಿನಲ್ಲಿ ಬರುತ್ತಿದ್ದರು. ಮಧ್ಯಾಹ್ನ 2.30 ಗಂಟೆ ಸುಮಾರಿಗೆ ಮಳವಳ್ಳಿ ಕಡೆಯಿಂದ ಬರುತ್ತಿದ್ದ ಮೈಸೂರು ನಗರ ವಿಭಾಗದ ಸಾತಗಳ್ಳಿ ಡಿಪೋಗೆ ಸೇರಿದ ಸಾರಿಗೆ ಸಂಸ್ಥೆ ಬಸ್ ಮದ್ದೂರು- ಮಳವಳ್ಳಿ ರಸ್ತೆಯ ಬೋರಾಪುರ ಗೇಟ್ ಬಳಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮದ್ದೂರು ಠಾಣೆ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಸಿಬ್ಬಂದಿ ಕ್ರೇನ್ ಸಹಾಯದಿಂದ ಅಪಘಾತ ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಪರಿಚಿತ ಶವ ಪತ್ತೆ

ಮದ್ದೂರು: ತಾಲೂಕಿನ ಚಾಮನಹಳ್ಳಿ ನಾಲೆಯಲ್ಲಿ ಶನಿವಾರ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಸುಮಾರು 50 ರಿಂದ 55 ವರ್ಷದ ವ್ಯಕ್ತಿ ಮೈ ಮೇಲೆ ಒಂದು ಕೆಂಪು ಬಿಳಿ ಗ್ರೇ ಮಿಶ್ರಿತ ಟಿ-ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದಾನೆ. ಈತನ ಬಗ್ಗೆ ಮಾಹಿತಿ ಉಳ್ಳವರು ಮದ್ದೂರು ಪೊಲೀಸರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Share this article