ಕನ್ನಡಪ್ರಭ ವಾರ್ತೆ ಬೆಂಗಳೂರು
ಇತ್ತೀಚೆಗೆ ವರ್ತೂರು ಸಮೀಪದ ಪ್ರೆಸ್ಟೀಜ್ ಲೇಕ್ ಸೈಡ್ ಹೆಬಿಬಾಬ್ ಅಪಾರ್ಟ್‌ಮೆಂಟ್‌ನ ಈಜು ಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ 9 ವರ್ಷದ ಬಾಲಕಿ ಸಾವು ಪ್ರಕರಣ ಸಂಬಂಧ ಅಪಾರ್ಟ್‌ಮೆಂಟ್‌ನ ನಿವಾಸಿಗಳ ಸಂಘದ ಅಧ್ಯಕ್ಷ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಹೆಬಿಬಾಬ್ ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘದ ಅಧ್ಯಕ್ಷ ದೇಬಶಿಸ್ ಸಿನ್ಹಾ, ಜಾವೇದ್ ಸಫೀಕ್ ರಾಂ, ಸಂತೋಷ್ ಮಹಾರಾಣ, ಬಿಕಾಸ್ ಕುಮಾರ್ ಫೋರಿಡಾ, ಭಕ್ತ ಚರಣ್ ಪ್ರಧಾನ್, ಸುರೇಶ್ ಹಾಗೂ ಗೋವಿಂದ್ ಮಂಡಲ್ ಬಂಧಿತರಾಗಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಘಟನಾ ಸ್ಥಳ ಪರಿಶೀಲಿಸಿದಾಗ ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘದ ನಿರ್ಲಕ್ಷ್ಯತನಕ್ಕೆ ಪುರಾವೆ ಸಿಕ್ಕಿತು. ಈ ಮಾಹಿತಿ ಆಧರಿಸಿ ಸಂಘದ ಅಧ್ಯಕ್ಷ ಸೇರಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.