ಕೋಟ್ಪಾ ಉಲ್ಲಂಘಿಸಿ ಸಿಗರೇಟ್‌ ಸೇಲ್‌: ಅಂಗಡಿಗೆ ನೋಟಿಸ್‌, ₹11,700 ದಂಡ

KannadaprabhaNewsNetwork |  
Published : Feb 20, 2026, 04:15 AM IST
ಕೋಟ್ಪಾ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ದಂಡ ವಿಧಿಸಿದ ಜಿಬಿಎ ಅಧಿಕಾರಿಗಳು | Kannada Prabha

ಸಾರಾಂಶ

ತಂಬಾಕು ನಿಯಂತ್ರಣ ಕಾಯ್ದೆ (ಕೋಟ್ಪಾ) ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟ ಮಾಡುವುದರ ವಿರುದ್ಧ ವಿಶೇಷ ತಪಾಸಣಾ ಅಭಿಯಾನ ಆರಂಭಿಸಿರುವ ಉತ್ತರ ಪಾಲಿಕೆ ಅಧಿಕಾರಿಗಳು, ವಿವಿಧ ಅಂಗಡಿಗಳ ತಪಾಸಣೆ ಕೈಗೊಂಡು 11,700 ರು. ದಂಡ ವಿಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ತಂಬಾಕು ನಿಯಂತ್ರಣ ಕಾಯ್ದೆ (ಕೋಟ್ಪಾ) ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟ ಮಾಡುವುದರ ವಿರುದ್ಧ ವಿಶೇಷ ತಪಾಸಣಾ ಅಭಿಯಾನ ಆರಂಭಿಸಿರುವ ಉತ್ತರ ಪಾಲಿಕೆ ಅಧಿಕಾರಿಗಳು, ವಿವಿಧ ಅಂಗಡಿಗಳ ತಪಾಸಣೆ ಕೈಗೊಂಡು 11,700 ರು. ದಂಡ ವಿಧಿಸಿದ್ದಾರೆ.

ವಾರ್ಡ್ ಸಂಖ್ಯೆ 11, 1, 23, 4 ಮತ್ತು 29ರಲ್ಲಿನ ವಿವಿಧ ವಾಣಿಜ್ಯ ಮಳಿಗೆಗಳಲ್ಲಿ ಕಾಯ್ದೆ ಉಲ್ಲಂಘಿಸಿ ಬಿಡಿಯಾಗಿ ಸಿಗರೇಟ್ ಮಾರಾಟ, ಶಿಕ್ಷಣ ಸಂಸ್ಥೆಗಳಿರುವ ಸ್ಥಳದಿಂದ 100 ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಬಾರದು ಎಂಬ ನಿಯಮ ಉಲ್ಲಂಘಿಸಿದವರಿಗೆ ನೋಟಿಸ್ ನೀಡಿ ದಂಡ ವಸೂಲಿ ಮಾಡಲಾಗಿದೆ.

ಉತ್ತರ ಪಾಲಿಕೆ ವ್ಯಾಪ್ತಿಯಲ್ಲಿ ಫೆ.18ರಿಂದ 26ರ ವರೆಗೆ ವಿಶೇಷ ಅಭಿಯಾನ ನಡೆಸಿ, ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಶಿಕ್ಷಣ ಸಂಸ್ಥೆಯ ಸಮೀಪದಲ್ಲಿ ತಂಬಾಕು ಉತ್ಪನ್ನಗಳನ್ನು ವಿತರಿಸುತ್ತಿದ್ದ ಅಂಗಡಿಯನ್ನು ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಮುಚ್ಚುವ ಕ್ರಮ ಕೈಗೊಳ್ಳಲಾಗಿದೆ. ದಂಡ ವಿಧಿಸಿದ ನಂತರವೂ ಮತ್ತೆ ಮಾರಾಟ ಮಾಡುವುದು ಕಂಡು ಬಂದರೆ ಅಂತಹ ಅಂಗಡಿಗಳ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ.

ಬಿಡಿಯಾಗಿ ಸಿಗರೇಟು ಮಾರಾಟ ಮಾಡುವುದರಿಂದ ಸಾರ್ವಜನಿಕರು ಅದೇ ಸ್ಥಳದಲ್ಲಿ ಸಿಗರೇಟ್ ಸೇದುತ್ತಾರೆ. ಇಂತಹ ಹೊಗೆಯಿಂದ ಸಾರ್ವಜನಿಕರ ಆರೋಗ್ಯಕ್ಕೆ ಹಾನಿ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ವಿರೋಧದ ನಡುವೆ ಮದುವೆ : ಸಿಟ್ಟಲ್ಲಿ ಅಳಿಯನ ಮನೆಗೆ ಮಾವನಿಂದ ಬೆಂಕಿ!
ಶಾಲೇಲಿ ಬ್ಲೇಡಿಂದ ಒಂದೇ ರೀತಿ ಕೈ ಕೊಯ್ದುಕೊಂಡ 35 ಮಕ್ಕಳು!