ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

KannadaprabhaNewsNetwork |  
Published : Jul 08, 2026, 01:45 AM IST
7ಕೆಎಂಎನ್ ಡಿ20  | Kannada Prabha

ಸಾರಾಂಶ

ಎರಡು ಬೈರ್‌ಗಳ ನಡುವೆ ಶನಿವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸಾವರ ಮೃತಪಟ್ಟು, ಮತ್ತೊಂದು ಬೈಕ್‌ನಲ್ಲಿದ್ದ ಇಬ್ಬರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಉಪ್ಪಿನಕೆರೆ ಗೇಟ್ ಮದ್ದೂರು- ಮಳವಳ್ಳಿ ಹೆದ್ದಾರಿಯಲ್ಲಿ ಜರುಗಿದೆ.

ಮದ್ದೂರು:

ಎರಡು ಬೈರ್‌ಗಳ ನಡುವೆ ಶನಿವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸಾವರ ಮೃತಪಟ್ಟು, ಮತ್ತೊಂದು ಬೈಕಿನಲ್ಲಿದ್ದ ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಉಪ್ಪಿನಕೆರೆ ಗೇಟ್ ಮದ್ದೂರು- ಮಳವಳ್ಳಿ ಹೆದ್ದಾರಿಯಲ್ಲಿ ಜರುಗಿದೆ. ಉಪ್ಪಿನಕೆರೆ ಗ್ರಾಮದ ವಸಂತ (48) ಮೃತ ವ್ಯಕ್ತಿ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವಸಂತ ಮದ್ದೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳೇದಿದ್ದಾರೆ. ಮತ್ತೊಂದು ಬೈಕ್‌ನ ಹಿಂಬದಿ ಸವಾರ ಮಂಡ್ಯ ತಾಲೂಕು ಯತ್ತಗದಹಳ್ಳಿಯ ಅಭಿಷೇಕ್ ಹಾಗೂ ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಉಪ್ಪಿನಕೆರೆ ಗ್ರಾಮದ ವಸಂತ ತಮ್ಮ ಜಾನುವಾರುಗಳಿಗೆ ಮೇವು ಕಟಾವು ಮಾಡಿಕೊಂಡು ಬೈಕ್ ಮೇಲೆ ಬರುತ್ತಿದ್ದಾಗ ಉಪ್ಪಿನಕೆರೆಗೇಟ್ ನಲ್ಲಿ ವೇಗವಾಗಿ ಬಂದ ಮತ್ತೊಂದು ಬೈಕ್‌ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಮಲಗಿದ್ದ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ
ಓವರ್ ಟೇಕ್ ವಿಚಾರ: ಐದು ಮಂದಿ ಪುಂಡರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ