ದರ್ಶನ್‌ ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್‌ ಗ್ಲಾಸ್‌ : ಸಿಬ್ಬಂದಿಯ ಕರ್ತವ್ಯ ಲೋಪ

Published : Aug 30, 2024, 09:16 AM IST
Darshan

ಸಾರಾಂಶ

ದರ್ಶನ್‌  ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್‌ ಗ್ಲಾಸ್‌ ಧರಿಸಿರುವ ಹಿನ್ನೆಲೆ ಕರ್ತವ್ಯಲೋಪ ಎಸಗಿದ  ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕಾರಾಗೃಹ ಮತ್ತು ಸುಧಾರಣೆ ಸೇವೆ ಉತ್ತರ ವಲಯದ ಡಿಐಜಿ ಟಿ.ಪಿ.ಶೇಷ ಅವರು ಇಲಾಖೆಗೆ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಬೆಳಗಾವಿ :  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್‌ನನ್ನು ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್‌ ಗ್ಲಾಸ್‌ ಧರಿಸಿರುವ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಎಸಗಿದ ಪೊಲೀಸ್‌ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕಾರಾಗೃಹ ಮತ್ತು ಸುಧಾರಣೆ ಸೇವೆ ಉತ್ತರ ವಲಯದ ಡಿಐಜಿ ಟಿ.ಪಿ.ಶೇಷ ಅವರು ಗುರುವಾರ ಇಲಾಖೆಗೆ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಕೊಲೆ ಪ್ರಕರಣದ ವಿಚಾರಣಾಧೀನ ಕೈದಿ ದರ್ಶನ ಬಳ್ಳಾರಿ ಜೈಲಿಗೆ ದಾಖಲಾಗುವ ವೇಳೆ ಕೂಲಿಂಗ್‌ ಗ್ಲಾಸ್‌ ಧರಿಸಿದ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿದೆ. ಬೆಂಗಾವಲಿಗಾಗಿ ನಿಯೋಜಿಸಿದ್ದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣಾಧೀನ ಕೈದಿ ದರ್ಶನ್‌ಗೆ ಕೂಲಿಂಗ್‌ ಗ್ಲಾಸ್‌ ಧರಿಸಲು ಹಾಗೂ ಬಳಕೆ ಮಾಡಲು ಅನುಮತಿ ನೀಡಿರುವುದು ರಾಜ್ಯದ ಜನತೆಯಲ್ಲಿ ತಪ್ಪು ಸಂದೇಶ ಹೋಗುತ್ತದೆ. ಇದರಿಂದಾಗಿ ಇಲಾಖೆಯ ಘನತೆಗೆ ಧಕ್ಕೆ ಉಂಟಾಗಿದೆ.

ಬಂಧಿಯ ಸ್ವಂತ ವಸ್ತುಗಳನ್ನು ನಿಯಮಾನುಸಾರ ಕಾರಾಗೃಹದ ಮುಖ್ಯದ್ವಾರದಲ್ಲಿ ಒಪ್ಪಿಸಬೇಕಾಗುತ್ತದೆ. ರಾಜ್ಯವ್ಯಾಪಿಯಾಗಿ ದರ್ಶನ್‌ ಗೆ ರಾಜಾತಿಥ್ಯ ನೀಡಿರುವ ವರದಿಗಳು ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುತ್ತಿವೆ. ಬಂಧಿಯ ಪ್ರತಿಯೊಂದು ಚಿಕ್ಕ ಚಟುವಟಿಕೆಗಳ ಮೇಲೆ ಸುದ್ದಿ ವಾಹನಿಗಳು ನಿಗಾ ಇಟ್ಟಿರುತ್ತವೆ ಎಂಬುದು ಗೊತ್ತಿದ್ದರೂ ಬೆಂಗಾವಲು ಸಿಬ್ಬಂದಿ ಕೂಲಿಂಗ್‌ ಗ್ಲಾಸ್‌ ಧರಿಸಲು ಅನುಮತಿ ನೀಡಿ, ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಎಸಗಿದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಪತ್ರದಲ್ಲಿ ಕೋರಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಷೇರುಪೇಟೆಯಲ್ಲಿ ಹೂಡಿಕೆ ನೆಪದಲ್ಲಿ ಉದ್ಯಮಿಗೆ ₹8.3 ಕೋಟಿ ಧೋಖಾ
ಪಾದಚಾರಿಗಳಿಗೆ ಬೆಕ್ ಗುದ್ದಿಸಿ ಕೆಳಗೆ ಬಿದ್ದು ಅಪ್ರಾಪ್ತ ಸವಾರ ಸಾವು