ಕನ್ನಡಪ್ರಭ ವಾರ್ತೆ ಮದ್ದೂರು
ಮಂಡ್ಯ ತಾಲೂಕು ಗಣಿಗ ಗ್ರಾಮದ ವಿನಯ ಹಾಗೂ ದೊಡ್ಡಕೊತ್ತನಹಳ್ಳಿಯ ವಿನಯ್ ಬಂಧಿತ ಆರೋಪಿಗಳು.
ಇವರಿಂದ 5 ಲಕ್ಷ ರು. ಮೌಲ್ಯದ 30 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಿಬ್ಬರೂ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು.ಮೂಲತಃ ವಳೆಗೆರೆಹಳ್ಳಿಯ ಅಂಬುಜಮ್ಮ ತನ್ನ ತಾಯಿ ಮನೆ ಮಾರಸಿಂಗನಹಳ್ಳಿಗೆ ಹೋಗಿ ತಮ್ಮ ಸ್ಕೂಟರ್‌ನಲ್ಲಿ ವಾಪಸ್ ಸ್ವಗ್ರಾಮಕ್ಕೆ ಬರುತ್ತಿದ್ದಾಗ ಆಕೆಯನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಆರೋಪಿಗಳಾದ ವಿನಯ್ ಮತ್ತು ವಿನಯ್ ದೇಶಹಳ್ಳಿ ಗ್ರಾಮದ ಆದಿಶಕ್ತಿ ದೇವಸ್ಥಾನದ ಬಳಿ ಬೈಕ್ ಅಡ್ಡಗಟ್ಟಿ ಕೃತ್ಯ ನಡೆಸಿ ಪರಾರಿಯಾಗುತ್ತಿದ್ದಾಗ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಧರ್ಮದೇಟು ನೀಡಿದ ನಂತರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಈ ಸಂಬಂಧ ಬೆಸಗರಹಳ್ಳಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಬಂದಿತರನ್ನು ಮದ್ದೂರು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್ಪಿ ಯಶವಂತ್ ಕುಮಾರ್ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ನಾರಾಯಣಿ ಅವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು.