ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 58 ಚಾಲಕರ ವಿರುದ್ಧ ಪ್ರಕರಣ

Published : Jun 17, 2025, 07:40 AM IST
bengaluru school bus

ಸಾರಾಂಶ

ರಾಜಧಾನಿಯಲ್ಲಿ ಮತ್ತೆ ಶಾಲಾ ವಾಹನ ಚಾಲಕರಿಗೆ ಸೋಮವಾರ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿದ್ದು, ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ 58 ಪ್ರಕರಣ ದಾಖಲಿಸಿದ್ದಾರೆ.

 ಬೆಂಗಳೂರು :  ರಾಜಧಾನಿಯಲ್ಲಿ ಮತ್ತೆ ಶಾಲಾ ವಾಹನ ಚಾಲಕರಿಗೆ ಸೋಮವಾರ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿದ್ದು, ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ 58 ಪ್ರಕರಣ ದಾಖಲಿಸಿದ್ದಾರೆ.

ನಗರದಲ್ಲಿ ಮದ್ಯಪಾನ ಮಾಡಿ ಚಾಲನೆ ಮಾಡುತ್ತಿದ್ದ ಶಾಲಾ ವಾಹನಗಳ ಚಾಲಕರ ವಿರುದ್ಧ ಬೆಳಗ್ಗೆ 7 ರಿಂದ 10ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು ಎಂದು ನಗರ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್‌. ಅನುಚೇತ್ ತಿಳಿಸಿದ್ದಾರೆ.

ಈ ಕಾರ್ಯಾಚರಣೆ ವೇಳೆ 4559 ವಾಹನಗಳನ್ನು ತಪಾಸಣೆ ನಡೆಸಲಾಗಿದ್ದು, ಅದರಲ್ಲಿ ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದ ಒಟ್ಟು 58 ಚಾಲಕರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿತ ಚಾಲಕರ ವಾಹನ ಪರವಾನಿಗೆಗಳನ್ನು ಮುಟ್ಟುಗೋಲು ಹಾಕಿ ಮುಂದಿನ ಕಾನೂನು ಕ್ರಮಕ್ಕೆ ಸಾರಿಗೆ ಇಲಾಖೆಗೆ ಕಳುಹಿಸಲಾಗಿದೆ ಎಂದು ಜಂಟಿ ಆಯುಕ್ತರು ಹೇಳಿದ್ದಾರೆ.

PREV
Read more Articles on

Recommended Stories

ಜಮೀನು ಅಕ್ರಮ ಪರಭಾರೆ: ಇಬ್ಬರ ಬಂಧನ
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!