ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಮೃತರನ್ನು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ನಾಗೇನಹಳ್ಳಿ ಗ್ರಾಮದ 45 ವರ್ಷ ವಯಸ್ಸಿನ ರಾಘವೇಂದ್ರ ಎಂದು ಗುರುತಿಸಲಾಗಿದೆ.
ದುರ್ಘಟನೆಯ ಹಿನ್ನೆಲೆಗೌರಿಬಿದನೂರು ನಗರದ ರಾಮಕೃಷ್ಣ ಶಾರದಾದೇವಿ ವಿದ್ಯಾ ಮಂದಿರ ಶಾಲೆಯಲ್ಲಿ ಶನಿವಾರ ಪೋಷಕರಿಗೆ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಪೋಷಕ ಆಟ ವೀಕ್ಷಿಸಲು ಶಾಲೆಯ ಮಕ್ಕಳ ಎಲ್ಲ ಪೋಷಕರು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಜೋರಾಗಿ ಗಾಳಿ ಬೀಸಿದ ಕಾರಣ ಶಾಮಿಯಾನ ಹಾಗೂ ಕಂಬಗಳು ಹಾರಿ ಹೈಟೆನ್ಷನ್ ವಿದ್ಯುತ್ ಲೈನ್‌ಗೆ ತಗುಲಿದೆ. ಈ ಸಂರ್ಭದಲ್ಲಿ ಶಾಮಿಯಾನಕ್ಕೆ ಅಳವಡಿಸಿದ್ದ ಕಬ್ಬಿಣದ ಕಂಬಿಗಳು ತಗುಲುದ ಪರಿಣಾಮ ಶಿಕ್ಷಕರು, ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿ ವಿದ್ಯುತ್ ತಗುಲಿ ಗಾಯಗೋಂಡಿದ್ದು ಅವರನ್ನು ಖಾಸಗಿ ಮತ್ತು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಡಳಿತ ಮಂಡಳಿ ಅಧ್ಯಕ್ಷ, ಉಸ್ತುವಾರಿ ವಶಕ್ಕೆಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ ಹಾಗೂ ಉಸ್ತುವಾರಿ ಪ್ರಕಾಶ ಎಂಬುವರನ್ನು ಪೋಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿ ತನಿಖೆ ಕೈಗೊಂಡಿದ್ದೇವೆ ಎಂದು ಡಿವೈಎಸ್ಪಿ ಎಸ್.ಶಿವಕುಮಾರ್ ತಿಳಿಸಿದ್ದಾರೆ.
ವಿಷಯ ತಿಳಿದ ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದ ಬಳಿಕ ಮಾತನಾಡಿ, ಇದೊಂದು ಆಘಾತಕಾರಿ ಘಟನೆ. ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪೋಲೀಸ್ ಇಲಾಖೆ ಅಧಿಕಾರಿಗಳಿಂದ ಪರವಾನಗಿ ಪಡೆದು ಇಂತಹ ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂದು ಹೇಳಿದರು. ಘಟನಾ ಸ್ಥಳ ಮತ್ತು ಆಸ್ಪತ್ರೆಗೆ ತಹಶೀಲ್ದಾರ್ ಮಹೇಶ್.ಎಸ್ ಪತ್ರಿ. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸಮೂರ್ತಿ. ವೃತ್ತ ನಿರೀಕ್ಷಕ ಸತ್ಯನಾರಾಯಣ ಭೇಟಿ ನೀಡಿದ್ದರು.