ಕನ್ನಡಪ್ರಭ ವಾರ್ತೆ ಮಂಡ್ಯ
ಶ್ರೀರಂಗಪಟ್ಟಣ ತಾಲೂಕು ನೇರಲಕೆರೆ ಗ್ರಾಮದ ಚೇತನ್ (23) ಎಂಬಾತನೇ ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ವಿದ್ಯಾರ್ಥಿ.
ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಅಂತಿಮ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಚೇತನ್ ಮಧ್ಯಾಹ್ನ ಮೈಸೂರಿನಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಶವವನ್ನು ವಶಕ್ಕೆ ಪಡೆದು ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕಾರು ಡಿಕ್ಕಿ ಪಾದಚಾರಿ ಮಹಿಳೆ ಸಾವು
ಪಟ್ಟಣದ ಮೈಸೂರು ರಸ್ತೆಯ ಶಾಂತಿ ಕಾಲೇಜು ಬಳಿ ರಸ್ತೆ ಬದಿ ನೀರು ತರಲು ನಡೆದು ಹೋಗುತ್ತಿದ್ದಾಗ ಸುನೀತಾ ಅವರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಸುನೀತಾರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ನಗರ ಓಲ್ಡ್ ಎಂ.ಸಿ ರಸ್ತೆಯ ಪಕ್ಕದ ರೈಲ್ವೆ ಇಲಾಖೆಗೆ ಸೇರಿದ ಖಾಲಿ ಜಾಗದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದ್ದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾರಸುದಾರರಿದ್ದಲ್ಲಿ ದೂ:08232-224500/ 08232-221345-224888 ಅನ್ನು ಸಂಪರ್ಕಿಸಲು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.