ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ರೈನ್ ಬೋ ಸೂಪರ್ ಮಾರ್ಕೆಟ್‌ಗೆ ಬೆಂಕಿ

KannadaprabhaNewsNetwork | Updated : May 25 2024, 06:01 AM IST

ಸಾರಾಂಶ

ಪಾಂಡವಪುರ ತಾಲೂಕಿನ ಬನಘಟ್ಟ ನಿವಾಸಿ ಧನರಾಜ್ ಅವರಿಗೆ ಸೇರಿದ ಸೂಪರ್ ಮಾರ್ಕೆಟ್‌ಗೆ ಶುಕ್ರವಾರ ಮುಂಜಾನೆ ಕ್ಯಾಸ್ ಕೌಂಟರ್ ಬಳಿ ಫ್ರಿಜ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಯಾಸ್ ಕೌಂಟರ್‌ಗೆ ಬೆಂಕಿ ಕಾಣಿಸಿಕೊಂಡಿದೆ. 

 ಪಾಂಡವಪುರ :  ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಟ್ಟಣದ ರೈನ್ ಬೋ ಸೂಪರ್ ಮಾರ್ಕೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ವಸ್ತುಗಳು ಸುಟ್ಟುಭಸ್ಮವಾಗಿ ಲಕ್ಷಾಂತರ ರು. ನಷ್ಟವಾಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ತಾಲೂಕಿನ ಬನಘಟ್ಟ ನಿವಾಸಿ ಧನರಾಜ್ ಅವರಿಗೆ ಸೇರಿದ ಸೂಪರ್ ಮಾರ್ಕೆಟ್‌ಗೆ ಶುಕ್ರವಾರ ಮುಂಜಾನೆ ಕ್ಯಾಸ್ ಕೌಂಟರ್ ಬಳಿ ಫ್ರಿಜ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಯಾಸ್ ಕೌಂಟರ್‌ಗೆ ಬೆಂಕಿ ಕಾಣಿಸಿಕೊಂಡಿದೆ.

ಬಳಿಕ ಇಡೀ ಸೂಪರ್ ಮಾರ್ಕೆಟ್‌ಗೆ ಬೆಂಕಿ ತಗುಲಿ ಶೇ.70 ರಷ್ಟು ಭಾಗ ಸುಟ್ಟು ಕರಕಲಾಗಿದೆ. ಸೂಪರ್ ಮಾರ್ಕೆಟ್‌ಗೆ ಬೆಂಕಿ ತಗುಲಿರುವುದನ್ನು ಕಂಡು ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಿಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದರು. ಅಷ್ಟರಲ್ಲಿ ಬಹುತೇಕ ಅಂಗಡಿ ಸುಟ್ಟು ಕರಕಲಾಗಿದೆ.

ಘಟನೆಯಿಂದ ಕ್ಯಾಸ್ ಕೌಂಟರ್ ನಲ್ಲಿದ್ದ 2 ಲಕ್ಷ ರು. ನಗದು ಹಾಗೂ ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಸುಮಾರು 40 ಲಕ್ಷ ರು.ಅಧಿಕ ನಷ್ಟ ಉಂಟಾಗಿದೆ ಎಂದು ಅಂಗಡಿ ಮಾಲೀಕ ಧನರಾಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

28ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಕನ್ನಡಪ್ರಭ ವಾರ್ತೆ ಮಂಡ್ಯಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರ ಮತ್ತು ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮೇ 28ರಂದು ತ್ರೈಮಾಸಿಕ ಕಾರ್ಯನಿರ್ವಹಣೆ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಚಿಕ್ಕ ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ನಗರ ಪ್ರದೇಶಗಳಾದ ಶಂಕರಪುರ, ಜೈನ್‌ ಸ್ಟ್ರೀಟ್, ಬೀಡಿ ಕಾಲೋನಿ, ಜಬ್ಬರ್‌ ಸರ್ಕಲ್, ವಿನಾಯಕನಂದ ಬಡಾವಣೆ, ಗ್ರಾಮಾಂತರ ಪ್ರದೇಶಗಳಾದ ಗೋಪಾಲಪುರ, ಚಿಕ್ಕಮಂಡ್ಯ, ಸಾತನೂರು, ಕೊಮ್ಮೇರಹಳ್ಳಿ, ಹುಲಿವಾನ, ಕೆ.ಗೌಡಗೆರೆ. ಎಚ್.ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ, ಎಚ್.ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ. ಹೊಸಹಳ್ಳಿ, ಬೀರಗೌಡನಹಳ್ಳಿ ಹಾಗೂ ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಕೆರಗೋಡು, ದೊಡ್ಡಗರುಡನಹಳ್ಳಿ, ಬಿಳಿದೇಗಲು, ಮುದಗಂದೂರು, ಮಾರಗೌಡನಹಳ್ಳಿ, ಬಿ.ಹೊಸೂರು, ಹಂಪಾಪುರ, ಕಲ್ಮಂಟಿದೊಡ್ಡಿ, ಸೌದೇನಹಳ್ಳಿ, ಬೆಟ್ಟಹಳ್ಳಿ, ಬೀಚನಹಳ್ಳಿ, ಪುರದಕೊಪ್ಪಲು, ಎಂ.ಹೊನ್ನೇನಹಳ್ಳಿ , ಬಿದರಕಟ್ಟೆ, ಬೆನ್ನಹಟ್ಟಿ, ಮನುಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Share this article