ಮಹಿಳೆಯನ್ನು ಅಪಹರಿಸಿದ ಆರೋಪ : ಎಫ್ಐಆರ್‌ ರದ್ದತಿ ಕೋರಿದ್ದ ರೇವಣ್ಣ ಅರ್ಜಿ 26ಕ್ಕೆ ವಿಚಾರಣೆ

ಸಾರಾಂಶ

 ಮಹಿಳೆಯನ್ನು ಅಪಹರಿಸಿದ ಆರೋಪದಲ್ಲಿ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.26ಕ್ಕೆ ಮುಂದೂಡಿದೆ.

ಬೆಂಗಳೂರು :  ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪದಲ್ಲಿ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.26ಕ್ಕೆ ಮುಂದೂಡಿದೆ.

ಎಫ್ಐ‌ಆರ್ ರದ್ದುಕೋರಿ ಪ್ರಕರಣದ ಮೊದಲನೇ ಆರೋಪಿಯಾಗಿರುವ ಎಚ್.ಡಿ. ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಗುರುವಾರ ವಿಚಾರಣೆ ನಡೆಸಿತು.

ರೇವಣ್ಣ ಪರ ವಕೀಲರು ಹಾಜರಾಗಿ, ಅರ್ಜಿಯಲ್ಲಿ ಕೆಲ ತಿದ್ದುಪಡಿ ಮಾಡಬೇಕಿದೆ. ಅದಕ್ಕಾಗಿ ಒಂದು ವಾರ ಕಾಲಾ

Share this article