)
ಕನ್ನಡಪ್ರಭ ವಾರ್ತೆ ಬೆಂಗಳೂರು
ಜೆ.ಪಿ.ನಗರ 1ನೇ ಹಂತದ ನಿವಾಸಿ ಮಂಜುಳಾ ಹಾಗೂ ಪ್ರಗತಿಪುರದ ಮಹಾದೇವಮ್ಮ ಬಂಧಿತರಾಗಿದ್ದು, ಆರೋಪಿಗಳಿಂದ 383 ಗ್ರಾಂ ಚಿನ್ನಾಭರಣ ಹಾಗೂ 104 ಬೆಳ್ಳಿ ವಸ್ತುಗಳು ಜಪ್ತಿ ಮಾಡಲಾಗಿದೆ. ಜೆ.ಪಿ.ನಗರ 1ನೇ ಹಂತದ 29ನೇ ಮುಖ್ಯರಸ್ತೆಯಲ್ಲಿರುವ ಆಕಾಶವಾಣಿ ಕೇಂದ್ರದ ನಿವೃತ್ತ ಹಿರಿಯ ಮುನಿಕೃಷ್ಣಪ್ಪರವರ ಮನೆಯಲ್ಲಿ ಈ ಕೃತ್ಯ ನಡೆದಿತ್ತು.
ಈ ಬಗ್ಗೆ ಅವರ ಪುತ್ರ ನೀಡಿದ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರು, ಶಂಕೆ ಮೇರೆಗೆ ನರ್ಸ್ ಹಾಗೂ ಮನೆ ಕೆಲಸದವರನ್ನು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಕೃತ್ಯ ಬಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ವಾರದ ಹಿಂದಷ್ಟೇ ಕೆಲಸಕ್ಕೆ ಸೇರ್ಪಡೆ
ಕೆಲ ದಿನಗಳ ಹಿಂದೆ ಬ್ಯಾಂಕ್ ಕೆಲಸದ ನಿಮಿತ್ತ ಮುನಿಕೃಷ್ಣಪ್ಪ ಹೊರ ಹೋಗಿದ್ದಾಗ ಅವರಿಗೆ ತಿಳಿಯದಂತೆ ಮನೆಯಲ್ಲಿ ಅಲ್ಮೇರಾದಲ್ಲಿಟ್ಟಿದ್ದ ಚಿನ್ನಾಭರಣವನ್ನು ಆರೋಪಿಗಳು ಕಳವು ಮಾಡಿದ್ದರು. ಮರುದಿನ ಸಂಜೆ ಮನೆಯಲ್ಲಿ ಅಲ್ಮೇರಾದಲ್ಲಿ ಒಡವೆಯನ್ನು ಅವರು ಪರಿಶೀಲಿಸಿದಾಗ ಕಳ್ಳತನ ವಿಷಯ ಗೊತ್ತಾಗಿದೆ. ಕೂಡಲೇ ತಮ್ಮ ಪುತ್ರನ ಮೂಲಕ ಜೆ.ಪಿ.ನಗರ ಠಾಣೆಗೆ ಅವರು ದೂರು ನೀಡಿದ್ದರು. ಆಗ ಮನೆಯಲ್ಲೇ ಇದ್ದ ಮಂಜುಳಾನ್ನು ಶಂಕೆ ಮೇರೆಗೆ ವಶಕ್ಕೆ ಪಡೆದು ಪೊಲೀಸರು ವಿಚಾರಿಸಿದಾಗ ಸತ್ಯ ಒಪ್ಪಿಕೊಂಡಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ.