ಸಲಿಂಗರತಿ: ಸೂರಜ್‌ ರೇವಣ್ಣಗೆ ಡಿಎನ್‌ಎ, ಪುರುಷತ್ವ ಪರೀಕ್ಷೆ

Published : Jun 28, 2024, 05:31 AM IST
Suraj Revanna

ಸಾರಾಂಶ

ಡಾ.ಸೂರಜ್ ರೇವಣ್ಣ ಅವರನ್ನು ಗುರುವಾರ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧಿಕಾರಿಗಳು ಡಿಎನ್‌ಎ ಹಾಗೂ ಪುರುಷತ್ವ ಪರೀಕ್ಷೆಗೊಳಪಡಿಸಿದ್ದಾರೆ.

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ (ಸಲಿಂಗರತಿ) ಪ್ರಕರಣ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರನ್ನು ಗುರುವಾರ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧಿಕಾರಿಗಳು ಡಿಎನ್‌ಎ ಹಾಗೂ ಪುರುಷತ್ವ ಪರೀಕ್ಷೆಗೊಳಪಡಿಸಿದ್ದಾರೆ.

ನಗರದ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಸಮ್ಮುಖದಲ್ಲೇ ಡಿಎನ್‌ಎ ಪರೀಕ್ಷೆಗೆ ಸೂರಜ್ ರೇವಣ್ಣ ಹಾಗೂ ಕೃತ್ಯದ ದೂರುದಾರನಿಂದ ರಕ್ತ ಮಾದರಿಯನ್ನು ವೈದ್ಯಕೀಯ ಸಿಬ್ಬಂದಿ ಸಹಕಾರದಲ್ಲಿ ಸಿಐಡಿ ಅಧಿಕಾರಿಗಳು ಸಂಗ್ರಹಿಸಿದ್ದಾರೆ.

ಸಿಐಡಿ ಕಚೇರಿಯಲ್ಲಿದ್ದ ಸೂರಜ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಿದ ಅಧಿಕಾರಿಗಳು, ಆನಂತರ ಮುಕ್ತ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಡಿಎನ್‌ಎ ಪರೀಕ್ಷೆಗೆ ಪ್ರಕ್ರಿಯೆ ನಡೆಸಿದೆ. ಹಾಗೆಯೇ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪುರುಷತ್ವ ಸಾಬೀತು ಮಹತ್ವದ್ದಾದ ಕಾರಣ ಪುರುಷತ್ವ ಪರೀಕ್ಷೆಯನ್ನೂ ನಡೆಸಲಾಗಿದೆ.

ಡಿಎನ್‌ಎ ಪರೀಕ್ಷೆ ಕಾರಣ? 

ಹಾಸನ ಜಿಲ್ಲೆಯ ಜೆಡಿಎಸ್ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಸೂರಜ್‌ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ, ಸೂರಜ್ ಅವರನ್ನು ಡಿಎನ್‌ಎ ಪರೀಕ್ಷೆಗೊಳಪಡಿಸಿದೆ. ಈ ಕೃತ್ಯ ನಡೆದ ಸ್ಥಳ ಹಾಗೂ ಕೃತ್ಯದ ನಡೆದ ವೇಳೆ ಸಂತ್ರಸ್ತ ಧರಿಸಿದ್ದ ಉಡುಪುಗಳಲ್ಲಿ ಪತ್ತೆಯಾದ ಕೆಲ ಕುರುಹುಗಳನ್ನಾಧರಿಸಿ ಸೂರಜ್ ಅ‍ವರಿಗೆ ಡಿಎನ್‌ಎ ಪರೀಕ್ಷೆ ನಡೆದಿದೆ. ಈ ಅಸಹಜ ಲೈಂಗಿಕ ಪ್ರಕರಣದಲ್ಲಿ ವೈಜ್ಞಾನಿಕ ಸಾಕ್ಷ್ಯ ಮಹತ್ವದ್ದಾಗಿದೆ. ಹೀಗಾಗಿ ಡಿಎನ್‌ಎ ಪರೀಕ್ಷೆಯನ್ನು ಕೂಡ ನಡೆಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಬೌರಿಂಗ್ ಆಸ್ಪತ್ರೆಯಲ್ಲಿ ಸೂರಜ್ ಅ‍ವರಿಗೆ ಬುಧವಾರ ಡಿಎನ್‌ಎ ಪರೀಕ್ಷೆಗೊಳಪಡಿಸಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದರು. ಆದರೆ ಇದಕ್ಕೆ ಸೂರಜ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪರೀಕ್ಷೆ ನಡೆಸದೆ ಆಸ್ಪತ್ರೆಯಿಂದ ಅ‍ವರನ್ನು ಮರಳಿ ಸಿಐಡಿ ಕಚೇರಿಗೆ ಕರೆತಂದಿದ್ದರು. ಹೀಗಾಗಿ ಡಿಎನ್‌ಎ ಪರೀಕ್ಷೆ ಸಲುವಾಗಿ ನ್ಯಾಯಾಲಯದ ಒಪ್ಪಿಗೆ ಪಡೆದು ಅವರಿಂದ ರಕ್ತ ಮಾದರಿ ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.

PREV

Recommended Stories

ಜಮೀನು ಅಕ್ರಮ ಪರಭಾರೆ: ಇಬ್ಬರ ಬಂಧನ
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!