ಮರಕ್ಕೆ ಇನೋವಾ ಕಾರು ಡಿಕ್ಕಿ: ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ

KannadaprabhaNewsNetwork | Published : Mar 5, 2024 1:33 AM

ಸಾರಾಂಶ

ಬೆಂಗಳೂರಿನಿಂದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನ ಸಿದ್ದಪ್ಪಾಜಿ ದೇವಸ್ಥಾನಕ್ಕೆ ಸ್ನೇಹಿತರಾದ ಮಹದೇವ್, ಶ್ರೀನಿವಾಸ (ಚಾಲಕ), ಹೇಮಂತ್ ಯಾದವ್, ದರ್ಶನ್, ತೇಜಸ್, ಅಭಿಷೇಕ್, ಉಮೇಶ್ ತೆರಳಿ ವಾಪಾಸ್ ಬೆಂಗಳೂರಿಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತಾಲೂಕಿನ ವಾಸುವಳ್ಳಿ ಬಳಿ ಭಾನುವಾರ ರಾತ್ರಿ ನಡೆದಿದೆ.

ಬೆಂಗಳೂರಿನ ಗೋವಿಂದರಾಜ ನಗರದ ಹೇಮಂತ್ ಯಾದವ್ (17) ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಗಾಯಗೊಂಡಿದ್ದ ದರ್ಶನ್ (21) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನ ಸಿದ್ದಪ್ಪಾಜಿ ದೇವಸ್ಥಾನಕ್ಕೆ ಸ್ನೇಹಿತರಾದ ಮಹದೇವ್, ಶ್ರೀನಿವಾಸ (ಚಾಲಕ), ಹೇಮಂತ್ ಯಾದವ್, ದರ್ಶನ್, ತೇಜಸ್, ಅಭಿಷೇಕ್, ಉಮೇಶ್ ತೆರಳಿ ವಾಪಾಸ್ ಬೆಂಗಳೂರಿಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರಿಗೆ ಕೈ, ಕಾಲು, ಮುಖಕ್ಕೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ತೇಜಸ್, ಮಹದೇವ್, ಶ್ರೀನಿವಾಸ್, ಮತ್ತು ಅಭಿಷೇಕ್ ಗಂಭೀರವಾಗಿ ಗಾಯಗೊಂಡಿದೆ. ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿ: ಪಾದಚಾರಿ ಸಾವುಮಳವಳ್ಳಿ:ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತ ಪಟ್ಟಿರುವ ಘಟನೆ ತಾಲೂಕಿನ ಟಿ.ಕಾಗೇಪುರ ಬಳಿ ಭಾನುವಾರ ಸಂಜೆ ನಡೆದಿದೆ.ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಹೊಸಹೆಮ್ಮಿಗೆ ಗ್ರಾಮದ ನಂಜುಂಡಯ್ಯ ಎಂಬುವವರ ಪುತ್ರ ರವಿ (37) ಸಾವನ್ನಪ್ಪಿದವರು.ರವಿ ಸೇರಿದಂತೆ ತಿ‌.ನರಸೀಪುರ ತಾಲೂಕಿನ ಹಲವು ರೈತರು ಖಾಸಗಿ‌ ಮಿನಿ ಬಸ್‌ನಲ್ಲಿ ಬೆಂಗಳೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ ಕೃಷಿ ಮೇಳಕ್ಕೆ ತೆರಳಿ ವಾಪಸ್ ಊರಿನತ್ತ ಹೋಗುತ್ತಿದ್ದ ವೇಳೆ ತಾಲೂಕಿನ ಟಿ.ಕಾಗೇಪುರ ಬಳಿ ಬಸ್ ನಿಲ್ಲಿಸಿ ಟೀ ಕುಡಿಯಲು ಇಳಿದಿದ್ದಾರೆ. ಈ ಸಂದರ್ಭದಲ್ಲಿ ರಸ್ತೆ ದಾಟುತ್ತಿದ್ದ ರವಿ ಅವರಿಗೆ ಮದ್ದೂರು ಕಡೆಯಿಂದ ಮಳವಳ್ಳಿಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರ ಸಹಾಯದೊಂದಿಗೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರವಿ ಸೋಮವಾರ ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಡಿವೈಎಸ್ ಪಿ ವಿ.ಕೃಷ್ಣಪ್ಪ, ಪಿಎಸ್ ಐ ಶ್ರವಣ ಸ.ದಾಸರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article