ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ : ಜಾಮೀನು ಸಿಕ್ರೂ ಜೈಲಲ್ಲೇ ನಾಗೇಂದ್ರ ಬಾಕಿ!

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಲಭ್ಯವಾಗಿದ್ದರೂ, ಜೈಲಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಲಭ್ಯವಾಗಿದ್ದರೂ, ಜೈಲಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. 

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ನಾಗೇಂದ್ರ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಆದರೆ, ನ್ಯಾಯಾಲಯದ ಷರತ್ತುಗಳನ್ನು ಪೂರೈಸದಿರುವ ಹಿನ್ನೆಲೆಯಲ್ಲಿ ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿಲ್ಲ ಎಂದು ಮೂಲಗಳು ಹೇಳಿವೆ. ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ವಿಧಿಸಿದ ಬಳಿಕ ಬುಧವಾರ ಜೈಲಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. 

ನಾಗೇಂದ್ರ ಅವರು ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಸೋಮವಾರ ನ್ಯಾಯಾಲಯ ಜಾಮೀನು ನೀಡಿದ ಹಿನಲ್ಲೆಯಲ್ಲಿ ಮಂಗಳವಾರ ಜೈಲಿಂದ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ, ಷರತ್ತುಗಳನ್ನು ವಿಧಿಸದ ಕಾರಣ ಜೈಲಿನಿಂದ ಬಿಡುಗಡೆಯಾಗಿಲ್ಲ. ಬುಧವಾರ ಷರತ್ತುಗಳನ್ನು ಪೂರೈಸಿದರೆ ಜೈಲಿಂದ ಬಿಡುಗಡೆಯಾಗಲಿದ್ದಾರೆ.

Share this article