ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಕೆ.ಆರ್.ಪುಟ್ಟರಂಗಪ್ಪ ಆಯ್ಕೆ

KannadaprabhaNewsNetwork |  
Published : Oct 27, 2023, 12:30 AM IST
ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಕೆ.ಆರ್.ಪುಟ್ಟರಂಗಪ್ಪ ಆಯ್ಕೆ | Kannada Prabha

ಸಾರಾಂಶ

ತಿಪಟೂರು: ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಆವರಣದಲ್ಲಿ ನ.29ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕುಡುವನಘಟ್ಟದ ಸಂಶೋಧಕರಾದ ಪ್ರೊ. ಕೆ.ಆರ್. ಪುಟ್ಟರಂಗಪ್ಪ ಅವರನ್ನು ಆಯ್ಕೆ ಮಾಡಲಾಯಿತು.

ಸಮ್ಮೇಳನಾಧ್ಯಕ್ಷ ಹೆಸರು ಘೋಷಣೆ ತಿಪಟೂರು: ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಆವರಣದಲ್ಲಿ ನ.29ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕುಡುವನಘಟ್ಟದ ಸಂಶೋಧಕರಾದ ಪ್ರೊ. ಕೆ.ಆರ್. ಪುಟ್ಟರಂಗಪ್ಪ ಅವರನ್ನು ಆಯ್ಕೆ ಮಾಡಲಾಯಿತು. ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಷಡಕ್ಷರಿ ಸಮ್ಮೇಳನಾಧ್ಯಕ್ಷರ ಹೆಸರನ್ನು ಘೋಷಣೆ ಮಾಡಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ ಭಾಷೆ, ನಾಡು-ನುಡಿಗಾಗಿ ಹೋರಾಟ ಮಾಡುತ್ತಾ ಬಂದಿದ್ದು, ಸಾಹಿತ್ಯ, ಕಲೆ, ಸಂಸ್ಕೃತಿ, ಜಾನಪದಕ್ಕೆ ಪ್ರಸಿದ್ಧಿಯಾಗಿದೆ. ಕಲೆ, ಸಾಹಿತ್ಯ, ಭಾಷೆಯನ್ನು ಉಳಿಸಿ-ಬೆಳೆಸುವಲ್ಲಿ ನ.29ರಂದು ಕಾಡಸಿದ್ದೇಶ್ವರ ಮಠದ ಆವರಣದಲ್ಲಿ ತಾಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಮ್ಮೇಳನ ಹಮ್ಮಿಕೊಂಡಿದ್ದು, ಇದಕ್ಕೆ ಬೇಕಾದ ಸಿದ್ಧತೆಗಳನ್ನು ಯಾವುದೇ ರೀತಿ ಕೊರತೆಯಾಗದಂತೆ ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡುವಂತೆ ತಾಲೂಕು ಆಡಳಿತಕ್ಕೆ ಸೂಚಿಸಲಾಗಿದೆ ಎಂದರು. ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಯುವಪೀಳಿಗೆಯಲ್ಲಿ ಸಾಹಿತ್ಯಾಭಿರುಚಿ ಮೂಡಿಸಲು ಕಸಾಪ ಹಲವಾರು ವಿಭಿನ್ನ ಕಾರ್ಯಕ್ರಮ ಕಾರ್ಯಗತಗೊಳಿಸಿದ್ದು, ತಾಲೂಕು ಸಮ್ಮೇಳನವನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬರು ಸಹಕಾರ ನೀಡುವ ಮೂಲಕ ಯಶಸ್ವಿಗೊಳಿಸಬೇಕೆಂದರು. ಕಸಾಪ ತಾ. ಅಧ್ಯಕ್ಷ ಎಂ. ಬಸವರಾಜಪ್ಪ ಹಾಗೂ ನೊಣವಿನಕೆರೆ ಹೋಬಳಿ ಅಧ್ಯಕ್ಷ ಹೆಚ್.ಎಸ್. ಓಂಕಾರಯ್ಯ ಸಮ್ಮೇಳನದ ಕಾರ್ಯ ಯೋಜನೆ, ಸಿದ್ಧತೆಗಳ ಬಗ್ಗೆ ತಿಳಿಸಿದರು. ಗ್ರಾ.ಪಂ ಅಧ್ಯಕ್ಷ ಕೆಂಪರಾಜು, ಸದಸ್ಯ ಶಂಕರ್, ಆಡಳಿತಾಧಿಕಾರಿ ಶ್ರೀಶಂಭು, ಗ್ರೇಡ್-೨ ತಹಸೀಲ್ದಾರ್ ಜಗನ್ನಾಥ್, ತಾ.ಪಂ ಇಒ ಸುದರ್ಶನ್, ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ಬಿಇಒ ಚಂದ್ರಯ್ಯ, ಸಿಡಿಪಿಒ ಅಶೊಕ್, ಜಿಲ್ಲಾ ಕಸಾಪ ಕಾರ್ಯದರ್ಶಿ ಯೋಗಾನಂದ, ಪ್ರಾಂಶುಪಾಲ ಎಂ.ಡಿ.ಶಿವಕುಮಾರ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶಂಕರೇಗೌಡ, ನಿವೃತ್ತ ಸಬ್ ಇನ್ಸ್‌ಫೆಕ್ಟರ್ ಶಿವಕುಮಾರ್, ಕಾರ್ಯದರ್ಶಿ ಎಚ್.ಎಸ್. ಮಂಜಪ್ಪ, ಕಲ್ಪಶ್ರೀ ಕಲಾವಿದ ಸಂಘದ ಅಧ್ಯಕ್ಷ ಬಸವರಾಜು, ಪದಾಧಿಕಾರಿಗಳಾದ ಸ.ಚ. ಜಗದೀಶ್, ಸುರೇಶ್, ರವೀಶ್, ಸಚ್ಚಿದಾನಂದ್, ಎ.ಬಿ. ಚಂದ್ರಶೇಖರ್, ಶಂಕರಪ್ಪ, ಎಚ್.ಜಿ. ಲಿಂಗರಾಜು, ಸ.ಬ. ರವೀಶ್, ಗುರುಬಸವಯ್ಯ, ಶಾರದಮ್ಮ, ಹೆಚ್.ಜೆ. ದಿವಾಕರ್ ಇದ್ದರು. ಫೋಟೊ...... ಫೋಟೋ 26-ಟಿಪಿಟಿ1 ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ಷಡಕ್ಷರಿ ಹಾಗೂ ಕಸಪಾ ಪದಾಧಿಕಾರಿಗಳು. ಸಮ್ಮೇಳನದ ಅಧ್ಯಕ್ಷರಾದ ಪ್ರೊ. ಕೆ.ಆರ್.ಪುಟ್ಟರಂಗಪ್ಪ ಫೋಟೋ 26-ಟಿಪಿಟಿ2ರಲ್ಲಿ ಕಳುಹಿಸಲಾಗಿದೆ.

PREV

Recommended Stories

ಜಮೀನು ಅಕ್ರಮ ಪರಭಾರೆ: ಇಬ್ಬರ ಬಂಧನ
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!