ಕನ್ನಡದ ಕಿರುತೆರೆ ನಟಿಯ ಶೌಚಾಲಯದ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌

Published : Feb 18, 2026, 05:13 AM IST
Mobile

ಸಾರಾಂಶ

ಕನ್ನಡದ ಕಿರುತೆರೆ ನಟಿಯೊಬ್ಬರು ಶೌಚಾಲಯಕ್ಕೆ ತೆರಳಿದ ವೇಳೆ ರಹಸ್ಯವಾಗಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿರುವ ವ್ಯಕ್ತಿಯೊಬ್ಬ ಆ ವಿಡಿಯೋವನ್ನು ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ನಗರದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು : ಕನ್ನಡದ ಕಿರುತೆರೆ ನಟಿಯೊಬ್ಬರು ಶೌಚಾಲಯಕ್ಕೆ ತೆರಳಿದ ವೇಳೆ ರಹಸ್ಯವಾಗಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿರುವ ವ್ಯಕ್ತಿಯೊಬ್ಬ ಆ ವಿಡಿಯೋವನ್ನು ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ನಗರದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಟಿಯೊಬ್ಬರು ನೀಡಿದ ದೂರಿನನ್ವಯ ಅಪರಿಚಿತನ ವಿರುದ್ಧ ಪ್ರಕರಣ

32 ವರ್ಷದ ನಟಿಯೊಬ್ಬರು ನೀಡಿದ ದೂರಿನನ್ವಯ ಅಪರಿಚಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರುದಾರರು ಫೆ.7 ರಂದು ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಆ ವೇಳೆ ಅವರು ಶೌಚಾಲಯಕ್ಕೆ ತೆರಳಿದ್ದಾರೆ. ಇದೇ ವೇಳೆ ಅವರ ಗಮನಕ್ಕೆ ಬಾರದೆ ವ್ಯಕ್ತಿಯೊಬ್ಬ ರಹಸ್ಯವಾಗಿ ಅವರ ವಿಡಿಯೋ ಮಾಡಿಕೊಂಡಿದ್ದಾನೆ. ಬಳಿಕ ಆ ಅಪರಿಚಿತ ಇನ್‌ಸ್ಟಾಗ್ರಾಂ ಮೂಲಕ ಆ ವಿಡಿಯೋವನ್ನು ದೂರುದಾರೆಗೆ ಕಳುಹಿಸುವ ಬದಲು ತಪ್ಪಾಗಿ ಆಕೆಯ ಸ್ನೇಹಿತೆ ಖಾತೆಗೆ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ನಿನ್ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ.

ಕೂಡಲೇ ಸ್ನೇಹಿತೆ ಈ ವಿಷಯವನ್ನು ದೂರುದಾರರಿಗೆ ತಿಳಿಸಿದ್ದು, ಅವರು ಆತಂಕಕ್ಕೆ ಒಳಗಾಗಿದ್ದಾರೆ. ನಂತರ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಮಾನಸಿಕವಾಗಿ ಯಾತನೆ

ನನ್ನ ಖಾಸಗಿ ವಿಡಿಯೋ ಮಾಡಿಕೊಂಡು ಅದನ್ನು ನನ್ನ ಸ್ನೇಹಿತೆಯ ಇನ್‌ಸ್ಟಾಗ್ರಾಂ ಮೂಲಕ ಆಕೆಗೆ ಕಳುಹಿಸಿ ನನಗೆ ಮಾನಸಿಕವಾಗಿ ಯಾತನೆ ನೀಡಿದ ಮತ್ತು ನನ್ನ ಖ್ಯಾತಿಗೆ ಹಾನಿ ಉಂಟು ಮಾಡಲು ಯತ್ನಿಸಿರುವ ಆರೋಪಿತರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ನಟಿ ಉಲ್ಲೇಖಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಕಾರು-ಆಟೋ ನಡುವೆ ಡಿಕ್ಕಿ: ಮೂವರಿಗೆ ಗಾಯ
ಇಸ್ರೇಲಿ ಮಹಿಳೆ ರೇ#, ಹತ್ಯೆ : ಮೂವರಿಗೆ ಗಲ್ಲು