ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ: ಪಾದಚಾರಿ ಸಾವು

KannadaprabhaNewsNetwork | Published : Nov 6, 2024 12:52 AM

ಸಾರಾಂಶ

ಯರಹಳ್ಳಿ ಹ್ಯಾಂಡ್ ಪೋಸ್ಟಿನಲ್ಲಿ ಪ್ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ಮುಗಿಸಿಕೊಂಡು ಸರಗೂರು ಮಾರ್ಗವಾಗಿ ನಡೆದುಕೊಂಡು ಹೋಗುತ್ತಿದ್ದಾಗ ಎಚ್‌.ಡಿ.ಕೋಟೆಯಿಂದ ಬಂದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಹ್ಯಾಂಡ್ ಪೋಸ್ಟ್

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಇಲ್ಲಿನ

ಸರಗೂರು ರಸ್ತೆಯಲ್ಲಿ ನಡೆದಿದೆ. ಮೈಸೂರು ತಾಲೂಕು ಗುಜ್ಜೆಗೌಡನಪುರದ ಮಹದೇವಸ್ವಾಮಿ (44) ಮೃತಪಟ್ಟವರು.

ಇವರು ಯರಹಳ್ಳಿ ಹ್ಯಾಂಡ್ ಪೋಸ್ಟಿನಲ್ಲಿ ಪ್ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ಮುಗಿಸಿಕೊಂಡು ಸರಗೂರು ಮಾರ್ಗವಾಗಿ ನಡೆದುಕೊಂಡು ಹೋಗುತ್ತಿದ್ದಾಗ ಎಚ್‌.ಡಿ.ಕೋಟೆಯಿಂದ ಬಂದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ.

ಗಾಯಗೊಂಡ ವ್ಯಕ್ತಿಯನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋದಾಗ ಚಿಕಿತ್ಸೆ ಫಲಕಾರಿ ಆಗದೆ ಮರಣ ಹೊಂದಿದ್ದಾರೆ. ಎಚ್‌.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಬಯಸಿದ್ದಾರೆ.ಕೆಂಪೇಗೌಡನಹುಂಡಿಯಲ್ಲಿ ದಂಪತಿ ಆತ್ಮಹತ್ಯೆ

ಕನ್ನಡಪ್ರಭ ವಾರ್ತೆ ಮೈಸೂರು

ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲೂಕು ಕೆಂಪೇಗೌಡನಹುಂಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಕೆಂಪೇಗೌಡನಹುಂಡಿ ನಿವಾಸಿ ಕುಮಾರ್ (35) ಮತ್ತು ಅವರ ಪತ್ನಿ ಮೋನಿಷಾ (28) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಇಬ್ಬರು ಮಕ್ಕಳು ಇದ್ದಾರೆ.

ಕಳೆದ ಸೆ.15 ರಂದು ಅದೇ ಗ್ರಾಮದ ನಾಗೇಶ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಕುಮಾರ್ ಮತ್ತು ಮೋನಿಷಾ ಕಾರಣ ಎಂದು ಪತ್ರ ಬರೆದಿಟ್ಟದ್ದು, ಈ ಸಂಬಂಧ ದಂಪತಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಊರು ಬಿಟ್ಟಿದ್ದ ದಂಪತಿ, ಮಂಗಳವಾರ ಊರಿಗೆ ಬಂದಾಗ ನಾಗೇಶ್ ಕುಟುಂಬದವರು ಜಗಳವಾಡಿದ್ದಾರೆ. ಇದರಿಂದ ಮನನೊಂದ ದಂಪತಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ವರುಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share this article