ಪೀಣ್ಯ :ದಪ್ಪಗಿರುವುದಕ್ಕೆ 15 ಹುಡ್ಗಿರಿಂದ ರಿಜೆಕ್ಟ್‌ - ಯುವ ಆಟೋ ಚಾಲಕ ಆತ್ಮಹತ್ಯೆ

KannadaprabhaNewsNetwork |  
Published : Jan 19, 2025, 02:15 AM ISTUpdated : Jan 19, 2025, 04:34 AM IST
ವೆಂಕಟೇಶ್‌ | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗಿ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದೀಗ ಇಂತಹದೇ ಘಟನೆಯೊಂದು ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

 ಪೀಣ್ಯ ದಾಸರಹಳ್ಳಿ : ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗಿ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದೀಗ ಇಂತಹದೇ ಘಟನೆಯೊಂದು ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾನು ದಪ್ಪಗಿರುವುದಕ್ಕೆ ಹುಡುಗಿ ಸಿಗುತ್ತಿಲ್ಲವೆಂದು ಯುವಕನೊಬ್ಬ ಸಾವಿಗೆ ಶರಣಾಗಿದ್ದಾನೆ.

ಬೆಂಗಳೂರು ಉತ್ತರ ತಾಲೂಕಿನ ನಾರಾಯಣಪ್ಪನಪಾಳ್ಯದ ನಿವಾಸಿ ವೆಂಕಟೇಶ್‌ (29) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಗೋವಿಂದರಾಜು ಮತ್ತು ಮಂಗಳಮ್ಮ ದಂಪತಿ ಪುತ್ರ ವೆಂಕಟೇಶ್​ ಅವರು ಮದುವೆಯಾಗಲು ಸುಮಾರು 15 ಹುಡುಗಿಯರನ್ನ ನೋಡಿದ್ದರು. ಎಲ್ಲಾ ಹುಡುಗಿಯರ ಪೋಷಕರು ಹುಡುಗ ದಪ್ಪಗಿದ್ದಾನೆಂದು ನಿರಾಕರಿಸಿದ್ದರು. ಇದರಿಂದ ಮನನೊಂದು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಶರಣಾಗಿದ್ದಾರೆ. ಎಷ್ಟೇ ಫೋನ್ ಮಾಡಿದರು ಕರೆ ಸ್ವೀಕರಿಸದ್ದಕ್ಕೆ ಚಿಕ್ಕಮ್ಮ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಆಕ್ಟಿವೇ ಮಾಡದ ಹೊಸ ಕ್ರೆಡಿಟ್ ಕಾರ್ಡ್‌ ಬಳಸಿ 1.08 ಲಕ್ಷ ರು. ದೋಚಿದ ಸೈಬರ್ ಖದೀಮರು
ನಿದ್ರೆಗೆ ಜಾರಿದ ಪ್ರಯಾಣಿಕನ ದೋಚಿ ಮಾರ್ಗ ಮಧ್ಯೆಯೇ ಇಳಿಸಿ ಕ್ಯಾಬ್‌ ಚಾಲಕ ಪರಾರಿ!