ಕನ್ನಡಪ್ರಭ ವಾರ್ತೆ ಹಲಗೂರು
ಹಲಗೂರು ಸಮೀಪದ ಮಾಸ್ಟರ್ ದೊಡ್ಡಿ ಗ್ರಾಮದ ನಿವಾಸಿ ಸಿದ್ದೇಗೌಡ (60) ಮೃತಪಟ್ಟವರು.
ಸಿದ್ದೇಗೌಡರು ಎಂದಿನಂತೆ ಹಸುಗಳನ್ನು ಮೇಯಿಸಲು ಮರಿಜೋಗಿದೊಡ್ಡಿ ಗ್ರಾಮದ ಹೊರವಲಯಕ್ಕೆ ತೆರಳಿದ್ದರು. ಈ ವೇಳೆ ಏಕಾಏಕಿ ಎದುರಾದ ಕಾಡುಕೋಣ ವ್ಯಕ್ತಿ ಮೇಲೆ ದಾಳಿ ನಡೆಸಿ ತಿವಿದಿದೆ. ಕಾಡುಕೋಣದ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಸಿದ್ದೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅದೇ ಪ್ರದೇಶದಲ್ಲಿ ಹಸು ಮತ್ತು ಕುರಿಗಳನ್ನು ಮೇಯಿಸುತ್ತಿದ್ದ ಗವಿಸಿದ್ದೇಗೌಡ ಹಾಗೂ ನಾಗಮ್ಮ ಅವರು ಕಾಡುಕೋಣ ದಾಳಿ ನಡೆಸುವುದನ್ನು ಕಂಡು ಭಯಭೀತರಾಗಿ ಸ್ಥಳದಿಂದ ಓಡಿ ಪಾರಾಗಿದ್ದಾರೆ. ಘಟನೆಯಿಂದ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮೂಡಿದೆ.
ಹಲಗೂರು ಪೊಲೀಸ್ ಠಾಣೆ ಪಿಎಸ್ಐ ಲೋಕೇಶ್ ಹಾಗೂ ಕಾವೇರಿ ವನ್ಯಜೀವಿ ವಲಯದ ಹಲಗೂರು ವಲಯ ಅರಣ್ಯಾಧಿಕಾರಿ ಪ್ರಮೋದ್ ಕುಮಾರ್ ದೇವ್ ಸೇರಿದಂತೆ ಅರಣ್ಯ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.