ಚಿಂದಿ ಆಯುತ್ತಿದ್ದವನ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ ಕಿಡಿಗೇಡಿಗಳು

KannadaprabhaNewsNetwork |  
Published : Nov 19, 2026, 03:45 AM IST
ಇಸ್ಲಾಂ  | Kannada Prabha

ಸಾರಾಂಶ

ಕಿಡಿಗೇಡಿಗಳು ವ್ಯಕ್ತಿಯೊಬ್ಬನ ಕೈಕಾಲು ಕಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ದಾರುಣವಾಗಿ ಕೊಲೆ ಮಾಡಿರುವ ಘಟನೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

-ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಸಾವು

-ಗಿರಿನಗರ ವ್ಯಾಪ್ತಿಯ ಈರಣ್ಣ ಗುಡ್ಡದಲ್ಲಿ ಘಟನೆ

ಕನ್ನಡಪ್ರಭ ವಾರ್ತೆ ಬೆಂಗಳೂರುಕಿಡಿಗೇಡಿಗಳು ವ್ಯಕ್ತಿಯೊಬ್ಬನ ಕೈಕಾಲು ಕಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ದಾರುಣವಾಗಿ ಕೊಲೆ ಮಾಡಿರುವ ಘಟನೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟವನನ್ನು ಜೆ.ಜೆ.ನಗರ ನಿವಾಸಿ ಸಯ್ಯದ್‌ ಹಾಜಿ ಅಲಿಯಾಸ್ ಮಹಮ್ಮದ್‌ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ 6 ಗಂಟೆಯ ಸುಮಾರಿಗೆ ವೀರಭದ್ರನಗರದ ಈರಣ್ಣನ ಗುಡ್ಡದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ವಿವರ:

ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಸಯ್ಯದ್‌ಗೆ ಕಿಡಿಗೇಡಿಗಳು ಬುಧವಾರ ಬೆಳಗ್ಗಿನ ಜಾವ 6 ಗಂಟೆಯ ಸುಮಾರಿಗೆ ಈರಣ್ಣನ ಗುಡ್ಡದಲ್ಲಿರುವ ಪಾಳು ಬಿದ್ದ ಜಾಗದಲ್ಲಿ ಹಗ್ಗದಿಂದ ಕೈಕಾಲು ಕಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ. ಸುಟ್ಟಗಾಯಗಳಿಂದಾಗಿ ಸೈಯ್ಯದ್‌ ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದು, ಈತನ ಚೀರಾಟ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಕೂಡಲೇ 112 ಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿ ಬಂದ ಗಿರಿನಗರ ಠಾಣೆ ಪೊಲೀಸರು ಕೂಡಲೇ ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಸೈಯದ್‌ ಸಂಜೆ 4 ಗಂಟೆಯ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣೆ ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಸೈಯದ್‌ಗೆ ಜತೆಯಲ್ಲಿ ಚಿಂದಿ ಆಯುತ್ತಿದ್ದವರೇ ಈ ಕೃತ್ಯ ಎಸಗಿರುವುದು ಕಂಡು ಬಂದಿದೆ. ಈರಣ್ಣ ಗುಡ್ಡದಲ್ಲಿರುವ ಪಾಳು ಬಿದ್ದ ಜಾಗವನ್ನು ಆರೋಪಿಗಳು ಅನೈತಿಕ ಚಟುವಟಿಕೆಗಳ ತಾಣವನ್ನಾಗಿ ಮಾಡಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಡಿವೈಡರ್‌ ದಾಟಿ ಬೊಲೆರೊಗೆ ಕಾರು ಡಿಕ್ಕಿ: ನಾಲ್ವರು ಸಾವು
ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಲ್ಲಿ ಬಿದ್ದು ಯುವ ಕಾರ್ಮಿಕ ಸಾವು