ಮಂಡ್ಯ ಮೂಲದ ನಟಿ ಪವಿತ್ರಾ ಕಾರು ಅಪಘಾತಕ್ಕೆ ಬಲಿ

Published : May 13, 2024, 11:21 AM IST
Trinayani actress Pavitra Jayaram

ಸಾರಾಂಶ

ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌, ಭಾನುವಾರ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಅಮರಾವತಿ: ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌, ಭಾನುವಾರ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಭಾನುವಾರ ಮೆಹಬೂಬ್‌ನಗರದಿಂದ ತಮ್ಮ ಹುಟ್ಟೂರಾದ ಮಂಡ್ಯ ಜಿಲ್ಲೆಯ ಹನಕೆರೆಗೆ ಬರುತ್ತಿದ್ದಾಗ ಮಹೆಬೂಬ್‌ನಗರ ಜಿಲ್ಲೆಯ ಶೇರಿಪಲ್ಲಿ ಗ್ರಾಮದ ಬಳಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹೈದರಾಬಾದ್‌ನಿಂದ ವನಪರ್ತಿಗೆ ಬರುತ್ತಿದ್ದ ಬಸ್ ಕಾರಿನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಪವಿತ್ರಾ ಜಯರಾಮ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪವಿತ್ರಾ ಅವರು ತೆಲುಗಿನ ತ್ರಿನಯಿನಿ ಧಾರವಾಹಿಯಿಂದ ಜನಪ್ರಿಯತೆ ಪಡೆದಿದ್ದರು. ಕನ್ನಡದ ಕೆಲವು ಧಾರಾವಾಹಿಗಳಲ್ಲೂ ಪವಿತ್ರಾ ಬಣ್ಣ ಹಚ್ಚಿದ್ದರು. ಜೋಕಾಲಿ, ರೋಬೋ ಫ್ಯಾಮಿಲಿ, ರಾಧಾ ರಮಣ, ನೀಲಿ ಧಾರವಾಹಿಗಳಲ್ಲಿ ನಟಿಸಿದ್ದರು.

PREV

Recommended Stories

ಜಮೀನು ಅಕ್ರಮ ಪರಭಾರೆ: ಇಬ್ಬರ ಬಂಧನ
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!