ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತ ಹಾವೇರಿಯ ಮಹಿಳೆಯರು ಇದೀಗ ಮಾಂಗಲ್ಯ ಸರ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಅವರು ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೋಸ್ಟ್ ಮೂಲಕ ತಾಳಿ ಸರ ರವಾನಿಸಿದ್ದಾರೆ.
ಹಾವೇರಿ : ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತ ಹಾವೇರಿಯ ಮಹಿಳೆಯರು ಇದೀಗ ಮಾಂಗಲ್ಯ ಸರ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಅವರು ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೋಸ್ಟ್ ಮೂಲಕ ತಾಳಿ ಸರ ರವಾನಿಸಿದ್ದಾರೆ.
ಮೈಕ್ರೋಫೈನಾನ್ಸ್‌ಗಳ ಕಿರುಕುಳ ಸಲ್ಲಿಸುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನೇರವಾಗಿಯೇ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಮಾಂಗಲ್ಯ ಉಳಿಸಿ ಅಭಿಯಾನ:
ಹಾವೇರಿ ಜಿಲ್ಲೆಯ ನೊಂದ ಮಹಿಳೆಯರು ಹಾಗೂ ರೈತ ಮುಖಂಡರು ‘ಮಾಂಗಲ್ಯ ಸರ ಉಳಿಸಿ’ ಎಂಬ ಅಭಿಯಾನ ಆರಂಭಿಸಿದ್ದು, ಹಾವೇರಿ ನಗರದ ಅಂಚೆ ಕಚೇರಿ ಮೂಲಕ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರವನ್ನೇ ರವಾನಿಸಿದ್ದಾರೆ.
ಸಾಲ ಕೊಟ್ಟ ಮೈಕ್ರೋ ಫೈನಾನ್ಸ್ ಕಂಪನಿಗಳು ಹಗಲು, ರಾತ್ರಿ ಎನ್ನದೇ ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದಾರೆ. ಮನೆಯಲ್ಲಿ ನೆಮ್ಮದಿಯಾಗಿ ಇರುವಂತಿಲ್ಲ. ಮನೆಗೆ ಬಂದರೆ ಇವರ ಕಿರುಕುಳ, ಇವರು ಬಂದರೆ ಸುತ್ತಮುತ್ತಲಿನವರ ಮೂದಲಿಕೆ ಕೇಳುವಂತಾಗಿದೆ. ಹೀಗಾಗಿ ಕಿರುಕುಳ ತಪ್ಪಿಸಿ, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರು ಒತ್ತಾಯಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಎಸ್ಪಿ ಕಚೇರಿಗೆ ತೆರಳಿದ ಮಹಿಳೆಯರು ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡ್ಡದಬೇವಿನಹಳ್ಳಿ ಗ್ರಾಮದ ಹಲವು ಮಹಿಳೆಯರು ಊರು ತೊರೆದು ಹೋಗಿರುವ ಘಟನೆಯೂ ಕಳೆದ ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು.