ಮನೆಯಲ್ಲೇ ಕತ್ತು ಸೀಳಿ ವ್ಯಕ್ತಿಯ ಹತ್ಯೆ..!

KannadaprabhaNewsNetwork |  
Published : Jan 31, 2024, 02:17 AM IST
30ಕೆಎಂಎನ್ ಡಿ18ನಾಗೇಶ್ | Kannada Prabha

ಸಾರಾಂಶ

ಕಳೆದ ಭಾನುವಾರ ಮಳವಳ್ಳಿ ತಾಲೂಕಿನ ಕೊಂಡದ ಮಾರಮ್ಮನ ದೇವಾಲಯಕ್ಕೆ ತೆರಳಿದ್ದ ವೇಳೆ ನಾಗೇಶ್ ಮತ್ತು ಚೇತನ್ ನಡುವೆ ಜಗಳ ನಡೆದಿತ್ತು. ಅಭಿ ಅಲಿಯಾಸ್ ಕಟ್ಟಪ್ಪ, ಚಂದ್ರ ಅಲಿಯಾಸ್ ಹಿಟಾಚಿ ಮತ್ತಿತರ ಸ್ನೇಹಿತರೂ ಕೂಡ ಚೇತನ್ ಜೊತೆಗೆ ಸಾಥ್ ನೀಡಿದ್ದರು.

ಕನ್ನಡಪ್ರಭ ವಾರ್ತೆ ಭಾರತೀನಗರ

ಮನೆಯಲ್ಲಿ ಯುವಕನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದೊಡ್ಡಅರಸಿನಕೆರೆ ಗ್ರಾಮದಲ್ಲಿ ನಡೆದಿದೆ.

ಚೌಡಯ್ಯ ಉರುಫ್ ತಮ್ಮಯ್ಯ ಪುತ್ರ ನಾಗೇಶ್ ಅಲಿಯಾಸ್ ಸ್ಪಾಟ್ (35) ಕೊಲೆಯಾದ ಯುವಕ. ಚೇತನ್ ಅಲಿಯಾಸ್ ಗಣೆಯಾರ ಚೇತ ಅವರ ಮನೆಯಲ್ಲಿ ಕೊಲೆ ನಡೆದಿದ್ದು, ಚೇತನ್ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳೆದ ಭಾನುವಾರ ಮಳವಳ್ಳಿ ತಾಲೂಕಿನ ಕೊಂಡದ ಮಾರಮ್ಮನ ದೇವಾಲಯಕ್ಕೆ ತೆರಳಿದ್ದ ವೇಳೆ ನಾಗೇಶ್ ಮತ್ತು ಚೇತನ್ ನಡುವೆ ಜಗಳ ನಡೆದಿತ್ತು. ಅಭಿ ಅಲಿಯಾಸ್ ಕಟ್ಟಪ್ಪ, ಚಂದ್ರ ಅಲಿಯಾಸ್ ಹಿಟಾಚಿ ಮತ್ತಿತರ ಸ್ನೇಹಿತರೂ ಕೂಡ ಚೇತನ್ ಜೊತೆಗೆ ಸಾಥ್ ನೀಡಿದ್ದರು. ಅಲ್ಲಿಂದ ಊರಿಗೆ ತೆರಳಿದ ನಂತರ ಗ್ರಾಮದ ಸೊಸೈಟಿ ಹಿಂಭಾಗ ಮತ್ತೆ ಇದೇ ಚೇತನ್ ನಾಗೇಶ್ ಮೇಲೆ ಜಗಳ ತೆಗೆದು ಹಲ್ಲೆಗೆ ಮುಂದಾಗಿದ್ದನೆಂದು ಹೇಳಲಾಗಿದೆ.

ಈ ಸಂಬಂಧ ಗ್ರಾಮದ ಕೆಲವು ಮುಖಂಡರು ರಾಜೀ ಸಂಧಾನ ನಡೆಸಿ ಇಬ್ಬರನ್ನು ಮನೆಗೆ ಕಳುಹಿಸಿದ್ದರು. ಮತ್ತೆ ಸೋಮವಾರ ಹಳೇ ಘಟನೆ ಮರುಕಳಿಸಿದೆ. ತನ್ನ ಮನೆಯಲ್ಲಿದ್ದ ನಾಗೇಶ್ ನನ್ನು ಮೊಬೈಲ್ ಮೂಲಕ ಕರೆ ಮಾಡಿ ಗಣೆಯಾರ ಚೇತನ್ ಮನೆಗೆ ಕರೆಯಿಸಿ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕೊಲೆ ಯಾರು ಮಾಡಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ.

ತೀವ್ರ ರಕ್ತಸ್ರಾವವಾಗಿ ನಾಗೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ್ದರಿಂದ ನಾಗೇಶ್ ಚೀರಾಟ ಯಾರಿಗೂ ಕೇಳಿಸಿಲ್ಲ ಎಂಬುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ನಂತರ ಸ್ಥಳಕ್ಕೆ ಆಗಮಿಸಿದ ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ನಾಗೇಶ್ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ರೌಡಿ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ನಾಲ್ವರು ಆರೋಪಿಗಳಿಗೆ ಜಾಮೀನು
ಪುತ್ರನ ಸಮಯ ಪ್ರಜ್ಞೆಯಿಂದ 6 ತಾಸು ಡಿಜಿಟಲ್‌ ಅರೆಸ್ಟ್‌ ಆಗಿದ್ದ ತಂದೆ ಅಕ್ರಮದಿಂದ ಪಾರು